ಹಾಸನ: ‘ರಾಜ್ಯದ ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದೇವೆ. ಇನ್ನೂ 2-3 ಕ್ಷೇತ್ರ ಕೇಳಿದ್ದರೆ ಕೊಡುತ್ತಿದ್ದರು’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಾ.21 ರಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದೇನೆ.
ನಾನು ಈ ಬಾರಿ ಚುನಾವಣೆಗೆ ನಿಲ್ಲುವುದಿಲ್ಲ. ಒಂದೇ ಕುಟುಂಬದ ಅನೇಕರು ರಾಜಕೀಯದಲ್ಲಿದ್ದಾರೆ. ಆದರೆ ದೇವೇಗೌಡರ ಕುಟುಂಬದ ಬಗ್ಗೆ ಮಾತ್ರ ಚರ್ಚೆಯಾಗುತ್ತಿದೆ’ ಎಂದರು.
‘ಡಾ.ಸಿ.ಎನ್. ಮಂಜುನಾಥ್ ಅವರನ್ನು ಅಭ್ಯರ್ಥಿ ಮಾಡಲು ತೀರ್ಮಾನಿಸಿರಲಿಲ್ಲ. 17 ವರ್ಷ ಅವರ ಸೇವೆ ನೋಡಿ, ಅವರೇ ಅಭ್ಯರ್ಥಿಯಾಗಬೇಕು ಎಂದು ಮಾಧ್ಯಮದವರೇ ಶುರು ಮಾಡಿದರು. ಬಿಜೆಪಿ ಹೈಕಮಾಂಡ್ ಕೂಡ ನಿಮ್ಮ ಭಾವನವರನ್ನು ಒಪ್ಪಿಸಬೇಕು ಎಂದು ಮನವಿ ಮಾಡಿತು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಮಂಜುನಾಥ್ ಸ್ಪರ್ಧಿಸುತ್ತಾರೆ’ ಎಂದರು.
Laxmi News 24×7