Breaking News

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಊಟೋಪಚಾರ ನೀಡಿ ಆರೈಕೆ ಮಾಡಿದ್ದ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಜಗಣಭೀ ಬಾಪುಲಾಲ್ ಪಟೇಲ್ ಅಜ್ಜಿ (108) ಇಂದು ನಿಧನ

Spread the love

ಚಿಕ್ಕೋಡಿ: ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಊಟೋಪಚಾರ ನೀಡಿ ಆರೈಕೆ ಮಾಡಿದ್ದ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಜಗಣಭೀ ಬಾಪುಲಾಲ್ ಪಟೇಲ್ ಅಜ್ಜಿ (108) ಇಂದು ನಿಧನರಾಗಿದ್ದಾರೆ.
1972ರಲ್ಲಿ ಮಹಾರಾಷ್ಟ್ರದ ಔರವಾಡ ಗ್ರಾಮದ ದೇವಸ್ಥಾನದ ಜಮೀನು ವಾದವನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಕೈಗೆತ್ತಿಕೊಂಡಿದ್ದರು. ಈ ಹಿನ್ನೆಲೆ ಚಿಕ್ಕೋಡಿಯ ಕರೋಶಿ ಗ್ರಾಮದಲ್ಲಿ ಅಂಬೇಡ್ಕರ್ ಅವರು 9 ದಿನ ತಂಗಿದ್ದರು. ಈ ವೇಳೆ ಅವರಿಗೆ ಜಗಣಭೀ ಅವರೇ ಊಟೋಪಚಾರದ ವ್ಯವಸ್ಥೆಯನ್ನು ಮಾಡಿದ್ದರು. ಅಂದು ಅಂಬೇಡ್ಕರ್ ಮುನ್ನಿ ಎಂದು ಜಗಣಭಿಯವರನ್ನು ಕರೆಯುತ್ತಿದ್ದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜಗಣಭೀ ಅಜ್ಜಿ ಇಂದು ಸ್ವ ಗ್ರಾಮ ಕರೋಶಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ಜಗಣಭೀ ಅವರಿಗೆ 108 ವಯಸ್ಸಾಗಿತ್ತು.

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ