Breaking News

ಈಶ್ವರಪ್ಪಗೆ ತಾಕತ್ತಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿ: ಆಯನೂರು

Spread the love

ಶಿವಮೊಗ್ಗ: ಕೆ.ಎಸ್ ಈಶ್ವರಪ್ಪ ಹೇಳುತ್ತಿರುವುದು ಎಲ್ಲಾ ಸುಳ್ಳು. ಈಶ್ವರಪ್ಪ ಬ್ಲ್ಯಾಕ್ ಮೇಲ್ ರಾಜಕಾರಣಿ. ಈಶ್ವರಪ್ಪ ಅವರಿಗೆ ಯಾರೂ ಟಿಕೆಟ್ ತಪ್ಪಿಸಲಿಲ್ಲ. 40% ಗೆ ಅವರೇ ಬಲಿದಾನ ಮಾಡಿಕೊಂಡಿದ್ದಾರೆ. ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ವಿಧಾನಸಭೆ, ಲೋಕಸಭೆ ಕೇಳಿದ್ದರು, ಎರಡೂ ತಪ್ಪಿ ಹೋಯ್ತು.

ಈಗ ಶಿಕ್ಷಕರ ಕ್ಷೇತ್ರ, ಪದವೀಧರ ಕ್ಷೇತ್ರ ಕೇಳುತ್ತಿದ್ದಾರೆ. ಅದು ಸಿಗಲಿಲ್ಲವಾದರೆ ಜಿ.ಪಂ. ಇದೆಯಲ್ಲಾ. ಅದಕ್ಕಾಗಿ ಈ ರೀತಿ ಮಾತನಾಡ್ತಿದ್ದಾರೆ. ಈಶ್ವರಪ್ಪ ಖಂಡಿತವಾಗಿ ಪಕ್ಷೇತರವಾಗಿ ಸ್ಪರ್ಧೆ ಮಾಡುವುದಿಲ್ಲ. ಅವರಿಗೆ ಖಂಡಿತವಾಗಿ ಅಂತಹ ಧೈರ್ಯ ಇಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು.

Shimoga; ಈಶ್ವರಪ್ಪಗೆ ತಾಕತ್ತಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿ: ಆಯನೂರು

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರಿಗೆ ಯಾಕೆ ಅಷ್ಟೊಂದು ಮನ್ನಣೆ ಕೊಡುತ್ತೀರಿ? ಕೈಲಾಗದ ಈಶ್ವರಪ್ಪ ಬಗ್ಗೆ ಏಕೆ ಪ್ರಶ್ನೆ ಕೇಳುತ್ತೀರಿ? ಶಿವಮೊಗ್ಗ ಜಿಲ್ಲೆಯ ಯಾವ ತಾಲೂಕಿನಲ್ಲಿ ಈಶ್ವರಪ್ಪ ಪ್ರಭಾವವಿದೆ? ಈಶ್ವರಪ್ಪ ಯಾವ ರಾಜ್ಯ ನಾಯಕ? ಈಶ್ವರಪ್ಪ ‌ಕೇವಲ ಶಿವಮೊಗ್ಗ ನಗರಕ್ಕೆ ನಾಯಕ. ಈಶ್ವರಪ್ಪ ಧೈರ್ಯಶಾಲಿಯಾದರೆ, ಜನರಿಗೆ ಬೇಕಾದ ವ್ಯಕ್ತಿಯಾದರೆ ಪಕ್ಷೇತರವಾಗಿ ಸ್ಪರ್ಧೆ ಮಾಡಲಿ. ಈಶ್ವರಪ್ಪ ಅವರ ಕೈಯಲ್ಲಿ ಏನೇನು ಆಗಲ್ಲ. ಕೇವಲ ಬೋರ್ಡ್ ಅಧ್ಯಕ್ಷರ ಸ್ಥಾನ ಪಡೆಯಲು ಈ ರೀತಿ ಮಾಡುತ್ತಿದ್ದಾರೆ. ಈಶ್ವರಪ್ಪ ಯಾವುದೇ ರಾಷ್ಟ್ರ ಭಕ್ತನಲ್ಲ, ಕಪಟ ರಾಷ್ಟ್ರ ಭಕ್ತ ಎಂದರು.

ಈಶ್ವರಪ್ಪ ಏನಾದರೂ ಪಕ್ಷೇತರನಾಗಿ ಸ್ಪರ್ಧೆ ಮಾಡಿದರೆ ನಾನು ಈಶ್ವರಪ್ಪನವರಿಗೆ ಮತ ಹಾಕುತ್ತೇನೆ. ಧಮ್ ತಾಕತ್ತಿದ್ದರೆ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿ. ಅವರಿಗೆ ಧಮ್ ಗಿಮ್ ಏನು ಇಲ್ಲ. ಅವರು ಗಂಡಸಾ? ನಾಳೆ ಮೋದಿ ಬಂದಾಗ ಮೋದಿ ಕಾಲಿಗೆ ಬೀಳುತ್ತಾರೆ ಎಂದು ಕುಟುಕಿದರು.


Spread the love

About Laxminews 24x7

Check Also

ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ

Spread the love ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ ಮೈಸೂರು: ಕನ್ನಡಕ್ಕೆ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ