ಬೆಳಗಾವಿ: ಜಿಲ್ಲೆಯಲ್ಲಿ ರಾಜ್ಯ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ನಾಳೆಯಿಂದ( ಜೂನ್ 4) ಐದು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಂಗಳೂರಿನಿಂದ ಬುಧವಾರ ಬೆಳಿಗ್ಗೆ 9 ಗಂಟೆಗೆ ಗೋಕಾಕಗೆ ಆಗಮಿಸಿ ವಾಸ್ತವ್ಯ. 5 ರಂದು ಬೆಳಿಗ್ಗೆ 9 ಗಂಟೆಗೆ ಗೋಕಾಕ್ ದಿಂದ ಹೊರಟು 11 ಗಂಟೆಗೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಕುಂದು ಕೊರತೆ ವಿಚಾರಣೆ, 12 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೊರೊನಾ ಮತ್ತು ನೆರೆ ಹಾವಳಿಯಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. 5.30 ಪುನಃಹ ಗೋಕಾಕ್ ಗೆ ತೆರಳಲಿದ್ದಾರೆ.
https://youtu.be/OYEMtBeW6b0
6 ರಂದು ಬೆಳಿಗ್ಗೆ 11 ಗಂಟೆಗೆ ಗೋಕಾಕ ನಗರ ಸಭೆಯಲ್ಲಿ ಸಾರ್ವಜನಿಕರ ಕುಂದು ಕೊರತೆ ವಿಚಾರಣೆಯಲ್ಲಿ ಭಾವಹಿಸಲಿದ್ದಾರೆ. ಗೋಕಾಕದಲ್ಲಿ ವಾಸ್ತವ್ಯ. 7ರಂದು ಬೆಳಿಗ್ಗೆ 9.30ಕ್ಕೆ ಗೋಕಾಕ್ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ವಿಚಾರಣೆ. 8ರಂದು ಪುನ್ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಆಪ್ತ ಕಾರ್ಯದರ್ಶಿ ಶ್ರೀನಿವಾಸ ಮಾರಂಗಪ್ಪನವರ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.