ಸುಡು ಬೇಸಿಗೆಯಿಂದ ಕಂಗಾಲಾಗಿರುವ ಕರ್ನಾಟಕ ಜನತೆಗೆ ಈ ಬಾರಿ ಯುಗಾದಿ ಡಬಲ್ ಖುಷಿ ತರಲಿದೆ. ಒಂದು ಕಡೆ ಹಬ್ಬದ ಸಂಭ್ರಮವಾದರೆ ಮತ್ತೊಂದು ಕಡೆ ರಾಜ್ಯದಲ್ಲಿ ಯುಗಾದಿ ವೇಳೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಭಾರತೀಯ ಹವಾಮಾನ ಇಲಾಖೆಯ ಕಾರ್ಯಾಚರಣೆಯ ವಿಸ್ತೃತ ಶ್ರೇಣಿಯ ಮುನ್ಸೂಚನೆ (IMD ERF) ಪ್ರಕಾರ ಮಾರ್ಚ್ ಅಂತ್ಯದ ವೇಳೆಗೆ ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.
ಏಪ್ರಿಲ್ 9ರಂದು ರಾಜ್ಯದಲ್ಲಿ ಯುಗಾದಿ ಹಬ್ಬದ ಸಮಯದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಂದರೆ ಏಪ್ರಿಲ್ 2ನೇ ವಾರದಿಂದ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ವಾತಾವರಣವನ್ನು ತಂಪಾಗಿಸುವ ಸಾಧ್ಯತೆ ಹೆಚ್ಚಾಗಿದೆ.
ಮೂರು ದಿನದಿಂದ ರಾಜ್ಯದಲ್ಲಿ ಮಳೆಕಳೆದ ಮೂರು ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿರುವುದು ಸದ್ಯ ಮಳೆ ಬಗ್ಗೆ ಹೆಚ್ಚಿನ ನಿರೀಕ್ಷೆ ಮೂಡಿಸಿದೆ.