Breaking News

2 ಸಾವಿರ ರೂ. ಕಳ್ಳತನ ಶಿಕ್ಷಕಿಯರು ಸಮವಸ್ತ್ರ ಬಿಚ್ಚಿಸಿ ವಿದ್ಯಾರ್ಥಿನಿ ಪರಿಶೀಲನೆ; ಆತ್ನಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

Spread the love

ಬಾಗಲಕೋಟೆ, ಮಾರ್ಚ್​.17: 2 ಸಾವಿರ ರೂ. ಕಳ್ಳತನವಾಗಿದೆ ಎಂದು ಶಿಕ್ಷಕಿಯರು ಸಮವಸ್ತ್ರ ಬಿಚ್ಚಿಸಿ ವಿದ್ಯಾರ್ಥಿನಿಯನ್ನು ಪರಿಶೀಲನೆ ನಡೆಸಿದ್ದು ಇದರಿಂದ ಮನನೊಂದ ವಿದ್ಯಾರ್ಥಿನಿ (Student) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ (Bagalkot) ನ

ಡೆದಿದೆ. 8ನೇ ತರಗತಿ ಓದುತ್ತಿದ್ದ ದಿವ್ಯಾ ಬಾರಕೇರ(14) ಆತ್ನಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಮಾರ್ಚ್ 16 ರಂದು ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ಬಂದು ನೇಣಿಗೆ ಶರಣಾಗಿದ್ದಾಳೆ.ಆ ಶಿಕ್ಷಕಿಯ 2 ಸಾವಿರ ರೂ ಶಾಲೆಯಲ್ಲಿ ಕಳೆದು ಹೋಗಿತ್ತು. ಆದರೆ ಶಿಕ್ಷಕಿಗೆ ವಿದ್ಯಾರ್ಥಿನಿಯರ ಮೇಲೆ‌ ಸಂಶಯ. ಇದರಿಂದ ಐದು ಜನ ವಿದ್ಯಾರ್ಥಿನಿಯರ ಸಮವಸ್ತ್ರ ಬಿಚ್ಚಿ ಚೆಕ್ ಮಾಡಿದ್ದಾರಂತೆ. ಜೊತೆಗೆ ದೇವರ ಮೇಲೆ‌ ಆಣೆ ಮಾಡಿಸಿದ್ದಾರಂತೆ.

 

ಹಣ ಕಳ್ಳತನವಾಗಿದೆ ಎಂದು ಸಮವಸ್ತ್ರ ಬಿಚ್ಚಿಸಿ ಪರಿಶೀಲನೆ ನಡೆಸಿದ್ದ ಶಿಕ್ಷಕಿಯರು, ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಅವಮಾನದಿಂದ ಇದರಲ್ಲಿ ಎಂಟನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಮೇಲೆ ಬಂದ ಸುಳ್ಳು ಆರೋಪಕ್ಕೆ ಬಾಲಕಿ ತನ್ನ ಜೀವವನ್ನು ತಾನೆ ಅಂತ್ಯ ಮಾಡಿಕೊಂಡಿದ್ದಾಳೆ.

ಇದರಿಂದ ಬಾಲಕಿಯ ಕುಟುಂಬಸ್ಥರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ‌. ಮಗಳ ನೆನೆದು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಈ ವಿದ್ಯಾರ್ಥಿನಿ ಹೆಸರು ದಿವ್ಯಾ ಬಾರಕೇರ, 14 ವರ್ಷ ವಯಸ್ಸು. ವಿದ್ಯಾರ್ಥಿನಿ ಆತ್ಮಹತ್ಯೆಗೆ ಆಕೆಯ ಶಿಕ್ಷಕಿಯೇ ಕಾರಣರಾಗಿದ್ದಾರೆ. ಈ ಘಟನೆ ನಡೆದಿದ್ದು ಬಾಗಲಕೋಟೆ ತಾಲ್ಲೂಕಿನ ಕದಂಪುರ ಗ್ರಾಮದಲ್ಲಿ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ