Breaking News

ಟೀ ಕುಡಿಸಲು ಎಂದು ಕರೆದೊಯ್ದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ಅರೆಸ್ಟ್

Spread the love

ರಾಮನಗರ, ಮಾರ್ಚ್​.18: ಹಾಸ್ಟಲ್‌ನಿಂದ ಕರೆದೊಯ್ದು 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 36 ವರ್ಷದ ವ್ಯಕ್ತಿ ಲೈಂಗಿಕ ಕಿರುಕುಳ ನೀಡಲಾಗಿರುವ ಘಟನೆ ನಡೆದಿದೆ. ಅಣ್ಣ ಎಂದು ಪರಿಚಯಿಸಿಕೊಂಡು ಟೀ ಕುಡಿಸಿಕೊಂಡು ಬರ್ತೇನೆ ಅಂತ ಅಪ್ರಾಪ್ತೆಯನ್ನು ಹಾಸ್ಟೆಲ್​ನಿಂದ ಕರೆದುಕೊಂಡು ಹೋಗಿ ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗುತ್ತಿದೆ.

ಟೀ ಕುಡಿಸಲು ಎಂದು ಕರೆದೊಯ್ದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ಅರೆಸ್ಟ್

ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿಯನ್ನು ಬಂಧಿಸಲಾಗಿದೆ.ಇನ್ನು ಅಪರಿಚಿತ ವ್ಯಕ್ತಿ ಬಾಲಕಿಯನ್ನು ಕರೆದುಕೊಂಡು ಹೋಗಿ ಎರಡು ತಾಸು ಕಳೆದರೂ ಬಾರದ ಹಿನ್ನೆಲೆ‌ ಹಾಸ್ಟಲ್ ಸಿಬ್ಬಂದಿ ಕುಟುಂಬಸ್ಥರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಲ್ಲದೆ ವ್ಯಕ್ತಿಯ ಹಾವಾಭಾವ ಕಂಡು ಸಿಬ್ಬಂದಿಗೆ ಅನುಮಾನ ಬಂದಿತ್ತು. ಸದ್ಯ ವಿಷಯ ತಿಳಿಯುತ್ತಿದ್ದಂತೆ ಕೂಡಲೇ ರಾಮನಗರ ಮಹಿಳಾ ಪೊಲೀಸ್ ಠಾಣೆಗೆ ಪೋಷಕರು ದೂರು ಸಲ್ಲಿಸಿದ್ದಾರೆ. ಆರೋಪಿ ಅಪ್ರಾಪ್ತಳನ್ನು ಮಾವಿನ‌ ತೋಪಿಗೆ ಕರೆದೊಯ್ದಿದ್ದ. ಕೃತ್ಯ ಸ್ಥಳಕ್ಕೆ ತೆರಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ