ವಿಜಯಪುರ, ಮಾ.19:ಲೋಕಸಭಾ ಚುನಾವಣೆನೀತಿ ಸಂಹಿತೆಹಿನ್ನೆಲೆ ಚೆಕ್ಪೋಸ್ಟ್ ನಿರ್ಮಿಸಿ ಚುನಾವಣೆಯಲ್ಲಿ ಅಕ್ರಮ ನಡೆಯದಂತೆ ಕ್ರಮಕೈಗೊಳ್ಳಲಾಗಿದೆ. ಅದರಂತೆ ಇಂದು(ಮಾ.19) ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ 93 ಲಕ್ಷ 50 ಸಾವಿರ ನಗದನ್ನು ವಿಜಯಪುರ(Vijayapura) ನಗರದ ಸಿಂದಗಿ ಬೈಪಾಸ್ ಬಳಿ ಜಿಲ್ಲಾ ಸಿಇಎನ್ ಪೊಲೀಸರು ತಪಾಸಣೆ ನಡೆಸಿ ಜಪ್ತಿ ಮಾಡಿದ್ದಾರೆ. ಜೊತೆಗೆ ಹಣದ ಸಮೇತ ಸಾಂಗ್ಲಿ ಮೂಲದ ಬಾಲಾಜಿ ನಿಕ್ಕಂ ಮತ್ತು ಸಚಿನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.
ಹೈದ್ರಾಬಾದ್‌ದಿಂದ ಹುಬ್ಬಳ್ಳಿಗೆ MH 01. CD 7537 ನಂಬರಿನ ಟೋಯೊಟಾ ಇನ್ನೋವಾ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ತಪಾಸಣೆ ಮಾಡಲಾಗಿದ್ದು, ಈ ವೇಳೆ ದಾಖಲೆಗಳು ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಾಂತರ ರೂಪಾಯಿ ಹಣವನ್ನು ಪೋಲಿಸರು ಜಪ್ತಿ ಮಾಡಿದ್ದಾರೆ. ಈ ಕುರಿತು ತನಿಖೆ ಮುಂದುವರೆದಿದ್ದು, ಸಿಇಎನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7