ಮುಂಬರುವ ಚಿಕ್ಕೋಡಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ರಾಯಬಾಗ ಪಟ್ಟಣದಲ್ಲಿ ಜರುಗಿದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಣಾ ಸಭೆಯನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದರು.
ಚಿಕ್ಕೋಡಿ ಲೋಕಸಭೆ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ಪಕ್ಷದ ಮಡಿಲಿಗೆ ತೆಗೆದುಕೊಳ್ಳಲು ಇದು ಸುವರ್ಣಾವಕಾಶ ಇದ್ದು ಯಾರೇ ಅಭ್ಯರ್ಥಿಯಾಗಿ ಆಯ್ಕೆ ಯಾದರೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಟೊಂಕು ಕಟ್ಟಿ ಕೆಲಸ ಮಾಡಬೇಕು. ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಂಚ ಗ್ಯಾರಂಟಿಗಳ ಬಗ್ಗೆ ಪ್ರಚಾರ ಮಾಡುವ ಮೂಲಕ ಮತದಾರರ ಮನವೊಲಿಸಲು ಪ್ರಯತ್ನಿಸಬೇಕು ಎಂದು ತಿಳಿಸಿದರು
ಶಾಸಕರಾದ ಮಹೇಂದ್ರ ತಮ್ಮಣ್ಣವರ, ಮಾಜಿ ಶಾಸಕರುಗಳಾದ ಶ್ಯಾಮ ಘಾಟಗೆ, ಕಾಕಾಸಾಹೇಬ ಪಾಟೀಲ, ರಾಯಬಾಗ ಮತಕ್ಷೇತ್ರದ ನಾಯಕ ಮಹಾವೀರ ಮೊಹಿತೆ ಸೇರಿ ಪಕ್ಷದ ಮುಖಂಡರು ಮತ್ತು ಪ್ರಮುಖರು ಉಪಸ್ಥಿತರಿದ್ದರು.
#SatishJarkiholi #PWDMinister
Laxmi News 24×7