Breaking News

ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರೋದು ಡೌಟ್- ಸಿ.ಟಿ.ರವಿ

Spread the love

ಬೆಂಗಳೂರು: ನಾನೇ ಸ್ಟ್ರಾಂಗ್ ಎನ್ನುವ ಸಿದ್ದರಾಮಯ್ಯನವರೇ ನಿಮ್ಮ ಪರಿಸ್ಥಿತಿ ಏನಿದೆ; 5 ವರ್ಷ ಸಿಎಂ ಆಗಿರುವ ಖಾತರಿಯೇ ನಿಮಗಿಲ್ಲ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ತಿಳಿಸಿದರು.

ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೇ 5 ವರ್ಷ ಸಿಎಂ, ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಎಂದು ಹೇಳಿಸಿಕೊಳ್ಳುವ ಸ್ಥಿತಿ ಅವರದು.

ದುರ್ಬಲ ಆಡಳಿತ ಸಿದ್ದರಾಮಯ್ಯರದು. ಕಳೆದೊಂದು ವರ್ಷವನ್ನು ಗಮನಿಸಿದರೆ ಆಡಳಿತದ ಹಿಡಿತವೇ ಅವರಿಗೆ ಸಿಕ್ಕಿಲ್ಲ ಎಂದು ಅರಿವಾಗುತ್ತದೆ ಟೀಕಿಸಿದರು. ನೀವೇ ನೇಮಕ ಮಾಡಿಕೊಂಡ ರಾಜಕೀಯ ಕಾರ್ಯದರ್ಶಿ, ಮುಖ್ಯಮಂತ್ರಿಗಳ ಸಲಹೆಗಾರರು ‘ಅಭಿವೃದ್ಧಿಗೆ ಬಿಡಿಗಾಸೂ ಕೊಡುತ್ತಿಲ್ಲ’ ಎಂದು ನಿಮ್ಮ ಗುಣಗಾನ ಮಾಡಿದ್ದಾರೆ ಎಂದು ವ್ಯಂಗ್ಯವಾಗಿ ತಿಳಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ