Breaking News

ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತ್ಯು. ನಾಲ್ವರಿಗೆ ಗಾಯ

Spread the love

ಧಾರವಾಡ : ಸಿಲಿಂಡ‌ರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ತಾಲೂಕಿನ ಕಲ್ಲೆ ನಡೆದಿದೆ.

ಮಹಾದೇವಿ ವಗೆಣ್ಣವರ (30) ಎಂಬ ಮಹಿಳೆಯೇ ಈ ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿ. ಉಳಿದಂತೆ ಸುರೇಶ ವಗೆಣ್ಣವರ, ಶ್ರೀಧರ ವಗೆಣ್ಣವರ, ಚಿನ್ನಪ್ಪ ವಗೆಣ್ಣವರ ಹಾಗೂ ಗಂಗವ್ವ ವಗೆಣ್ಣವರ ಎಂಬುವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Gas Cylinder: ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತ್ಯು. ನಾಲ್ವರಿಗೆ ಗಾಯ

ಬೆಳಿಗ್ಗೆ ಗ್ಯಾಸ್ ಲಿಕೇಜ್ ಆಗಿತ್ತು. ಏಕಾಏಕಿ ಸ್ಪಾರ್ಕ್ ಆಗಿ ಸಿಲಿಂಡ‌ರ್ ಸ್ಫೋಟಗೊಂಡಿದೆ. ಇದರಿಂದ ಮನೆ ತುಂಬ ಬೆಂಕಿ ಆವರಿಸಿ ಅನಾಹುತ ಸಂಭವಿಸಿದೆ. ಅಡುಗೆ ಮನೆಯಲ್ಲೇ ಇದ್ದ ಮಹಾದೇವಿ ಹೊರಗಡೆ ಬರಲಾಗದೇ ಅಲ್ಲೇ ಸಿಲುಕಿ ಸಾವನ್ನಪ್ಪಿದ್ದಾಳೆ.

ಇದರಿಂದ ಮಹಾದೇವಿ ದೇಹ ಸಂಪೂರ್ಣ ಬೆಂದು ಹೋಗಿದೆ. ಬಾಕಿ ಉಳಿದವರು, ಹಾಗೋ ಹೀಗೋ ಮಾಡಿ ಹೊರ ಬಂದಿದ್ದಾರೆ. ಅವರಿಗೂ ಗಾಯಗಳಾಗಿವೆ. ಅಕ್ಕಪಕ್ಕವೇ ಎರಡೂರು ಸಿಲಿಂಡರ್ ಇದ್ದವು. ಆದರೆ ಅವುಗಳಿಂದ ಬೆಂಕಿ ಸ್ಫೋಟಗೊಂಡಿಲ್ಲ. ಇದರಿಂದ ಮತ್ತೊಂದು ದೊಡ್ಡ ಅನಾಹುತ ತಪ್ಪಿದಂತಾಗಿದೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ