ಹುಬ್ಬಳ್ಳಿ:ಪಕ್ಷದಿಂದ ಟಿಕೆಟ್ ಅಧಿಕೃತವಾಗಿ ಘೋಷಣೆಯಾದ ಮರು ದಿನದಿಂದಲೇ ಬೆಳಗಾವಿಯಲ್ಲಿ ಪ್ರಚಾರ ಮಾಡಲಾಗುವುದು. ಒಂದೆರಡು ದಿನಗಳಲ್ಲಿಯೇ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಟಿಕೆಟ್ ತಪ್ಪಿಸುವ ಷಡ್ಯಂತ್ರ ನಡೆದಿತ್ತುಎಂದು ನನಗೆ ಅನಿಸಿಲ್ಲ. ಬೆಳಗಾವಿಯ ಮುಖಂಡರಾದ ಅಭಯ ಪಾಟೀಲ, ಪ್ರಭಾಕರ ಕೋರೆ, ಅನಿಲ ಬೆನಕೆ, ಈರಣ್ಣ ಕಡಾಡಿ ಇನ್ನಿತರ ಪ್ರಮುಖರ ಜತೆ ಮಾತುಕತೆ ನಡೆಸಿದ್ದು, ಎಲ್ಲರು ಸೇರಿ ಚುನಾವಣೆ ನಡೆಸೋಣ ಎಂದಿದ್ದಾರೆ ಎಂದರು.
ದೇಶದಲ್ಲಿ ಎನ್ ಡಿಎ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುವ ವಾತಾವರಣವಿದೆ. ಮೋದಿ ಮತ್ತೊಮ್ಮೆ ಪ್ರಧಾನಿ ಅಗಬೇಕೆನ್ನುವುದು ಜನರ ಆಶಯ ಎಂದು ಹೇಳಿದರು.
Laxmi News 24×7