Home / ರಾಜಕೀಯ / ಕಾಂಗ್ರೆಸ್‌ ಪಟ್ಟಿ ಬಹುತೇಕ ಅಂತಿಮ: ಅಧಿಕೃತ ಘೋಷಣೆ ಒಂದೇ ಬಾಕಿ

ಕಾಂಗ್ರೆಸ್‌ ಪಟ್ಟಿ ಬಹುತೇಕ ಅಂತಿಮ: ಅಧಿಕೃತ ಘೋಷಣೆ ಒಂದೇ ಬಾಕಿ

Spread the love

ವದೆಹಲಿ, : ಲೋಕಸಭಾ ಚುನಾವಣೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಪಡೆ ಕರ್ನಾಟಕದ ಏಳು ಕ್ಷೇತ್ರಗಳ ಅಭ್ಯರ್ಥಿಯನ್ನ ಘೋಚಿಸಿದ್ದು, ಬಾಕಿ ಇರುವ 21 ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯೇ ದೊಡ್ಡ ಸವಾಲ್‌ ಆಗಿದೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆದಿದೆ.ಸಭೆಯಲ್ಲಿ ರಾಜ್ಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿದ್ದಾರೆ.

ಕರ್ನಾಟಕದ 21 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆದಿದ್ದು, ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಫೈನಲ್‌ ಮಾಡಿದ್ದು, ಇಂದು ( ಬುಧವಾರ) ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಇನ್ನೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬುಧವಾರ ಅಧಿಕೃತವಾಗಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ರಾಜ್ಯದ 28 ಕ್ಷೇತ್ರಗಳ ಪೈಕಿ ಏಳು ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನ ಕಾಂಗ್ರೆಸ್‌ ಹೈಕಮಾಂಡ್‌ ಪ್ರಕಟಿದೆ.ತುಮಕೂರಿಗೆ ಎಸ್.ಪಿ.ಮುದ್ದೇಹನುಮೇಗೌಡ, ಮಂಡ್ಯಕ್ಕೆ ವೆಂಕಟರಾಮೇಗೌಡ (ಸ್ಟಾರ್ ಚಂದ್ರು), ಬಿಜಾಪುರ ರಾಜು ಅಲಗೂರು, ಬೆಂಗಳೂರು ಗ್ರಾಮಾಂತರಕ್ಕೆ ಡಿ.ಕೆ.ಸುರೇಶ್, ಹಾವೇರಿಗೆ ಆನಂದಸ್ವಾಮಿ ಗಡ್ಡದೇವರಮಠ, ಹಾಸನಕ್ಕೆ ಎಂ.ಶ್ರೇಯಸ್ಸ ಪಟೇಲ್, ಶಿವಮೊಗ್ಗಕ್ಕೆ ಗೀತಾ ಶಿವರಾಜ್ ಕುಮಾರ್ ಹುರಿಯಾಳುಗಳಾಗಿದ್ದಾರೆ.‌

ಇನ್ನು ಬಾಕಿ ಇರುವ 21 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ ಕೆಲವು ಕ್ಷೇತ್ರಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತಗಾದೆ ತೆಗೆದಿದ್ದರು.ಮಂಗಳವಾರ ನಡೆದ ಸಭೆಯಲ್ಲಿ 16 ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನ ಅಂತಿಮಗೊಳಿಸಿದೆ.

ದಾವಣಗೆರೆಗೆ ಪ್ರಭಾ ಮಲ್ಲಿಕಾರ್ಜುನ್,ಬೆಳಗಾವಿ ಕ್ಷೇತ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್‍ಗೆ, ಚಿಕ್ಕೊಡಿಗೆ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ ಅವರಿಗೆ ಟಿಕೆಟ್ ಖಚಿತವಾಗಲಿದೆ.ಉತ್ತರ ಕನ್ನಡ ಕ್ಷೇತ್ರಕ್ಕೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರನ್ನ ಕಣಕ್ಕಿಳಿಸಲು ಕಾಂಗ್ರೆಸ್‌ ಮುಂದಾಗಿದೆ.


Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ