ಬೆಂಗಳೂರು: ‘ನಾನು ಏನೇ ರಾಜಕೀಯ ಮಾಡಿದರೂ ಅದು ಮಂಡ್ಯದಲ್ಲಿ. ಇದನ್ನು ವರಿಷ್ಠರಿಗೆ ಹೇಳಿ ಬಂದಿದ್ದೇನೆ. ಬಿಜೆಪಿ ವರಿಷ್ಠರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ. ಇದೇ 22ರವರೆಗೆ ಕಾಯುವಂತೆಯೂ ಹೇಳಿದ್ದಾರೆ’ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಹೇಳಿದರು.
ದೆಹಲಿಯಿಂದ ವಾಪಸಾದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬೆಂಗಳೂರು ಉತ್ತರ ಕ್ಷೇತ್ರಕ್ಕೇ ನಾನು ಹೋಗಲಿಲ್ಲ. ಇನ್ನು ಚಿಕ್ಕಬಳ್ಳಾಪುರಕ್ಕೆ ಹೋಗುತ್ತೇನೆಯೇ? ಮಂಡ್ಯ ಕ್ಷೇತ್ರವನ್ನು ಬಿಟ್ಟು ಬೇರೆಲ್ಲೂ ಸ್ಪರ್ಧೆ ಮಾಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.
ದೆಹಲಿಗೆ ತೆರಳಿದ್ದ ಸುಮಲತಾ ಅವರು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಆ ವೇಳೆ, ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅವರಿಗೆ ಸೂಚಿಸಲಾಗಿತ್ತು ಎಂಬ ಚರ್ಚೆಗಳು ನಡೆದಿದ್ದವು. ‘ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧಿಸಿ ಏನು ಮಾಡಲಿ’ ಎಂದು ಸುಮಲತಾ ಪ್ರಶ್ನಿಸಿದ್ದಾರೆ.
Laxmi News 24×7