Breaking News

ರಾಜ್ಯದ 5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ’ ವಿವಾದ: ನಾಳೆ ಬೆಳಿಗ್ಗೆ 10.30ಕ್ಕೆ ಹೈಕೋರ್ಟ್ ತೀರ್ಪು ಪ್ರಕಟ

Spread the love

ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದ್ರೇ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದಂತ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು.

ಈ ಬಳಿಕ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂತಹ ತೀರ್ಪನ್ನು ನಾಳೆ ಬೆಳಿಗ್ಗೆ 10.30ಕ್ಕೆ ಹೈಕೋರ್ಟ್ ವಿಭಾಗಿಯ ನ್ಯಾಯಪೀಠವು ಪ್ರಕಟಿಸಲಿದೆ.

 

ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಕೋರಿ ಖಾಸಗಿ ಶಾಲೆಗಳ ಸಂಘದಿಂದ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದಂತ ಏಕ ಸದಸ್ಯ ನ್ಯಾಯಪೀಠವು ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಹೈಕೋರ್ಟ್, 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸೋದಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು.

ಆದ್ರೇ ಹೈಕೋರ್ಟ್ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಸಂಘದಿಂದ ಸುಪ್ರೀಂ ಕೋರ್ಟ್ ಮೊರೆ ಹೋಗಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು ಬಾಕಿ ಇರುವಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ಹೀಗಾಗಿ ಶಾಲಾ ಶಿಕ್ಷಣ ಇಲಾಖೆಯಿಂದ ಬೋರ್ಡ್ ಪರೀಕ್ಷೆಯನ್ನು ಮುಂದೂಡಿ ಆದೇಶ ಕೂಡ ಮಾಡಲಾಗಿತ್ತು.

ಈ ಬೆನ್ನಲ್ಲೇ ಇಂದು ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಸುಪ್ರೀಂ ಕೋರ್ಟ್ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚಿಸಿದ್ದಂತ ಸೂಚನೆಯಂತೆ ವಿಚಾರಣೆಯನ್ನು ಪೂರ್ಣಗೊಳಿಸಿತ್ತು. ಆ ನಂತ್ರ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ನಾಳೆ ಬೆಳಿಗ್ಗೆ 10.30ಕ್ಕೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದ ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರನ್ನೊಳ್ಳಗೊಂಡ ನ್ಯಾಯಪೀಠವು ಕಾಯ್ದಿರಿಸಿದ್ದಂತ ತೀರ್ಪನ್ನು ಪ್ರಕಟಿಸಿದೆ. ಹೀಗಾಗಿ ಪೋಷಕರು, ಮಕ್ಕಳಲ್ಲಿ ಮತ್ತೆ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದೋ ಅಥವಾ ನಡೆಯುತ್ತೋ ಎಂಬ ಆತಂಕ, ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಆ ಬಗ್ಗೆ ನಾಳೆಯವರೆಗೆ ಕಾದು ನೋಡಬೇಕಿದೆ.


Spread the love

About Laxminews 24x7

Check Also

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ