Breaking News

ಗಣಿ ಇಲಾಖೆ ಡಿಡಿ ಹುದ್ದೆ ರದ್ದು

Spread the love

ಚಾಮರಾಜನಗರ, ಮಾರ್ಚ್‌, 23: ಉತ್ಕೃಷ್ಟ ಮಟ್ಟದ ಕರಿಕಲ್ಲಿಗೆ ಹೆಸರಾಗಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ರಾಜಧನ, ಡಿಎಂಎಫ್ ಸಂಗ್ರಹಣೆ ನಿರೀಕ್ಷೆ ಮಟ್ಟದಲ್ಲಿರದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರ ಹುದ್ದೆಯನ್ನು ರದ್ದು ಪಡಿಸಲಾಗಿದೆ.
ಕಳೆದ ಮಾರ್ಚ್‌ 20ರಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಅಧೀನ ಕಾರ್ಯದರ್ಶಿ ಎಸ್.ಸುಮ ಗಣಿ ಇಲಾಖೆ ಉಪ ನಿರ್ದೇಶಕರ ಹುದ್ದೆ ನಿವಿಕರಿಸಿ ಹಿರಿಯ ಭೂ ವಿಜ್ಞಾನಿ ಹುದ್ದೆಯನ್ನಾಗಿ ಪರಿವರ್ತಿಸಲಾಗಿದೆ.
ಚಾಮರಾಜನಗರ ಸೇರಿದಂತೆ ಈ ಜಿಲ್ಲೆಗಳಲ್ಲಿ ಗಣಿ ಇಲಾಖೆ ಡಿಡಿ ಹುದ್ದೆ ರದ್ದು
ಕರ್ನಾಟಕ ಉಪ ಖನಿಜ ರಿಯಾಯಿತಿ (ತಿದ್ದುಪಡಿ) ನಿಯಮಾವಳಿ 2023ರ ಮಾರ್ಚ್‌ 17ರಿಂದ ಜಾರಿ ಆಗಿದ್ದು, 2016ರ ಆಗಸ್ಟ್‌ 12ರ ಪೂರ್ವದಲ್ಲಿ ಸ್ವೀಕೃತಗೊಂಡು ನಿಯಮ 8(ಬಿ) ರನ್ವಯ ಅನರ್ಹಗೊಂಡ ಅರ್ಜಿಗಳನ್ನು ಕಲ್ಲು ಗಣಿ ಗುತ್ತಿಗೆಗೆ ಮಂಜೂರಾತಿಗಾಗಿ ಪರಿಗಣಿಸಬೇಕಾಗಿದ್ದು, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಕಲ್ಲು ಗಣಿ ಗುತ್ತಿಗೆ ಮಂಜೂರಾತಿ ಅರ್ಜಿಗಳು, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಜಿಲ್ಲೆಗಳಿಗಿಂದ ಹೆಚ್ಚಿನ ಸಂಖ್ಯೆಯಲ್ಲಿದ್ದು, ವಿಲೇವಾರಿಗೆ ಕಾರ್ಯದೊತ್ತಡ ಹೆಚ್ಚಾಗುವ ಸಾದ್ಯತೆ ಇರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.
ಇನ್ನು, ಬೆಂಗಳೂರು, ಚಾಮರಾಜನಗರ ಹಾಗೂ ದಕ್ಷಿಣ ಕನ್ನಡದ ಉಪ ನಿರ್ದೇಶಕರ ಹುದ್ದೆಗಳು ಹಿರಿಯ ಭೂ ವಿಜ್ಞಾನಿ ಹುದ್ದೆಗಳಾಗಿ ಬದಲಾದರೇ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿ ಜಿಲ್ಲೆಯ ಹಿರಿಯ ಭೂ ವಿಜ್ಞಾನಿ ಹುದ್ದೆಯನ್ನು ಉನ್ನತೀಕರಿಸಿ ಉಪ ನಿರ್ದೇಶಕ ಹುದ್ದೆಗಳಾಗಿ ಬದಲಿಸಲಾಗಿದೆ. 

Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ