Breaking News

ರಸ್ತೆಗೆ ಬಂದ ಒಂಟಿಸಲಗ

Spread the love

ಖಾನಾಪುರ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ನಂದಗಡ- ಬೀಡಿ ರಸ್ತೆಯ (ಬೆಳಗಾವಿ- ತಾಳಗುಪ್ಪ ರಾಜ್ಯ ಹೆದ್ದಾರಿ) ಬೇಕವಾಡ ಕ್ರಾಸ್ ಬಳಿ ಶನಿವಾರ ಮಧ್ಯಾಹ್ನ ಒಂಟಿಸಲಗ ಕಾಣಿಸಿಕೊಂಡಿತು.

ಆನೆ ಜುಂಜವಾಡ- ಬೇಕವಾಡ ಮಧ್ಯದಲ್ಲಿ ರಸ್ತೆ ದಾಟಿ ಜುಂಜವಾಡ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಗಳಲ್ಲಿ ನುಗ್ಗಿದೆ.

 

ಆನೆ ಕಂಡು ಜನ ಅದರ ಫೋಟೊ, ವಿಡಿಯೊ ಮಾಡಿಕೊಳ್ಳಲು ಮುಂದಾದರು. ಇದರಿಂದ ಸ್ಥಳದಲ್ಲಿ ಜನಜಂಗುಳಿ ಏರ್ಪಟ್ಟಿತು.

ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಜನರನ್ನು ನಿಯಂತ್ರಿಸಿದರು. ಆನೆಯನ್ನು ಕಾಡಿಗಟ್ಟಲು ಕಾರ್ಯಾಚರಣೆ ಶುರು ಮಾಡಿದರು.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ