Breaking News

ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ಸಿಎಂ ಬದಲಾವಣೆ ಕೂಗು: ಡಿ.ಕೆ. ಶಿ.

Spread the love

ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಸಿಎಂ ಸಿದ್ದರಾಮಯ್ಯಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಮುಖ್ಯಮಂತ್ರಿ ಹುದ್ದೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ನಾನು ಸಿಎಂ ಆಗುತ್ತೇನೆ ಎಂದು ಹೇಳಿದ್ದಾರೆ.

ರಾಜಕಾರಣದಲ್ಲಿ ಏನು ಬೇಕಾದರೂ ನಡೆಯುತ್ತದೆ. ಯಾರಿಗೂ, ಯಾವುದೂ ಶಾಶ್ವತವಲ್ಲ ಎಂದು ತಿಳಿಸಿದ್ದಾರೆ. ಈ ಮೂಲಕ ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಎಂಬುದನ್ನು ಶಿವಕುಮಾರ್ ಬಹಿರಂಗ ಪಡಿಸಿದ್ದಾರೆ.

ಇನ್ನೂ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೆಲ ಸಚಿವರು ಹಾಗೂ ಶಾಸಕರು ಅಧಿಕಾರ ಹಂಚಿಕೆ ಕುರಿತು ಬಹಿರಂಗ ಹೇಳಿಕೆ ನೀಡುತ್ತಲೇ ಇದ್ದಾರೆ. ಒಂದೆಡೆ, ಸ್ವತಃ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಸಹ ತಮ್ಮ ತಂದೆಯೇ ಪೂರ್ಣಾವಧಿ ಸಿಎಂ ಎಂದು ಹೇಳಿದ್ದರು. ಇದೀಗ ರಾಜ್ಯದಲ್ಲಿ ಮತ್ತೊಮ್ಮೆ ಸಿಎಂ ಬದಲಾವಣೆ ಕೂಗು ಕೇಳಿ ಬಂದಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ