Breaking News

ಖಾನಾಪುರ: ಲಂಚ ಪಡೆಯುವಾಗ ಸಿಕ್ಕಿಬಿದ್ದ ಎಂಜಿನಿಯರ್

Spread the love

ಖಾನಾಪುರ: ಸ್ಥಳೀಯ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ದುರದುಂಡೇಶ್ವರ ಮಹಾದೇವ ಬನ್ನೂರ ಮಂಗಳವಾರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮನರೇಗಾ ಕಾಮಗಾರಿಗೆ ತಾಂತ್ರಿಕ ಅನುಮೋದನೆ ನೀಡಲು ತಮ್ಮ ಕಚೇರಿಯಲ್ಲೇ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರಿಂದ ₹10 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.

 

ಖಾನಾಪುರ ತಾಲ್ಲೂಕಿನ ನೀಲಾವಡೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 2ನೇ ವಾರ್ಡಿನಲ್ಲಿ ನರೇಗಾ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ತಾಂತ್ರಿಕ ಅನುಮೋದನೆ ನೀಡುವಂತೆ ಕೋರಿ ಗ್ರಾಮ ಪಂಚಾಯ್ತಿಯಿಂದ ಆನ್-ಲೈನ್ ಮೂಲಕ ಪ್ರಸ್ತಾವ ಸಲ್ಲಿಸಲಾಗಿತ್ತು.

ಖಾನಾಪುರ: ಲಂಚ ಪಡೆಯುವಾಗ ಸಿಕ್ಕಿಬಿದ್ದ ಎಂಜಿನಿಯರ್

ಬನ್ನೂರ ಅವರು ನೀಲಾವಡೆ ಗ್ರಾಮ ಪಂಚಾಯ್ತಿ ಸದಸ್ಯ ವಿನಾಯಕ ಮುತಗೇಕರ ಅವರ ಬಳಿ ₹10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ವಿನಾಯಕ ಅವರು ವಿಷಯವನ್ನು ಬೆಳಗಾವಿಯ ಲೋಕಾಯುಕ್ತ ಪೊಲೀಸರ ಗಮನಕ್ಕೆ ತಂದಿದ್ದರು.

ಆರೋಪಿಯನ್ನು ಲಂಚದ ಹಣದ ಸಮೇತ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಲೋಕಾಯುಕ್ತ ಎಸ್.ಪಿ. ಹಣುಮಂತರಾಯ ಮಾರ್ಗದರ್ಶನದಲ್ಲಿ ಡಿಎಸ್ಪಿ ಭರತ ರೆಡ್ಡಿ, ಇನ್‌ಸ್ಪೆಕ್ಟರ್‌ಗಳಾದ ಉಸ್ಮಾನ ಅವಟಿ, ರವಿಕುಮಾರ ಧರ್ಮಟ್ಟಿ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ