Breaking News

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ದೂರು ದಾಖಲು!

Spread the love

ಶಿವಮೊಗ್ಗ : ರಾಜ್ಯ ಬಿಜೆಪಿ ಪಕ್ಷಕ್ಕೆ ಸೆಡ್ಡು ಹೊಡೆದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಕೆ.ಎಸ್.ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ.

 

ಮಾರ್ಚ್ 24 ರಂದು ಶಿಕಾರಿಪುರದಲ್ಲಿ ಬೈಕ್ ರ್ಯಾಲಿಗೆ ಅನುಮತಿ ಪಡೆದಿದ್ದ ಈಶ್ವರಪ್ಪ ಅವರು ನಿಯಮ ಮೀರಿ ಬೈಕ್ ರ್ಯಾಲಿ ನಡೆಸಿದ್ದರು. ರ್ಯಾಲಿಯಲ್ಲಿ ಹತ್ತು ಬೈಕ್, ಒಂದು ಜೀಪ್ ಮಾತ್ರ ಬಳಸುವುದಾಗಿ ಅನುಮತಿ ಪಡೆದಿದ್ದರು. ಆದರೆ ರ್ಯಾಲಿಯಲ್ಲಿ 50 ಕ್ಕೂ ಹೆಚ್ಚು ಬೈಕ್ ಗಳನ್ನು ಬಳಸಲಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ