Breaking News

ಕಾಂಗ್ರೆಸ್ ಪಟ್ಟಿ ಬಿಡುಗಡೆ; ಇನ್ನೂ ಅಂತಿಮವಾಗದ ಅಭ್ಯರ್ಥಿಗಳು

Spread the love

ಹೊಸದಿಲ್ಲಿ: ಕಾಂಗ್ರೆಸ್ ಪಕ್ಷ ಬುಧವಾರ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ, ಜಾರ್ಖಂಡ್, ಮಧ್ಯಪ್ರದೇಶ, ತೆಲಂಗಾಣ ರಾಜ್ಯಗಳ 14 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಆದರೆ ಉತ್ತರ ಪ್ರದೇಶದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಪಡಿಸಿದರೂ, ಇದರ ಘೋಷಣೆಗೆ ಕಾಯಲಾಗುತ್ತಿದೆ ಎಂದು ಉನ್ನತ ಮೂಲಗಳು ಹೇಳಿವೆ.ಆದ್ದರಿಂದ ರಾಜ್ಯದಲ್ಲಿ ರಾಯಬರೇಲಿ ಮತ್ತು ಅಮೇಥಿ ಕ್ಷೇತ್ರದ ಅಭ್ಯರ್ಥಿಗಳ ಹೆಸರಷ್ಟೇ ಅಂತಿಮವಾಗಲು ಬಾಕಿ ಉಳಿದಿವೆ.

 

ಬುಧವಾರ ನಡೆದ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ, ಪ್ರತಿಷ್ಠಿತ ರಾಂಚಿ ಕ್ಷೇತ್ರದಿಂದ ಮಾಜಿ ಕೇಂದ್ರ ಸಚಿವ ಸುಬೋಧ್ ಕಾಂತ್ ಸಹಾಯ್ ಸ್ಪರ್ಧಿಸುವ ಸಂಬಂಧ ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ; ಈ ಬಗ್ಗೆ ಮತ್ತಷ್ಟು ಚರ್ಚೆ ಅಗತ್ಯವಿದೆ ಎಂಬ ನಿರ್ಧಾರಕ್ಕೆ ಸಭೆಯಲ್ಲಿ ಬರಲಾಗಿದೆ ಎಂದು ಪಕ್ಷದ ಮೂಲಗಳು ಸ್ಪಷ್ಟಪಡಿಸಿವೆ.

ರಾಯಬರೇಲಿ ಮತ್ತು ಅಮೇಥಿ ಕ್ಷೇತ್ರಗಳ ಬಗ್ಗೆ ಬುಧವಾರ ಯಾವುದೇ ಚರ್ಚೆ ನಡೆದಿಲ್ಲ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರಾಯ್ ಹೇಳಿದ್ದಾರೆ. “ಕಳೆದ ಸಭೆಯಲ್ಲೇ ಈ ಎರಡು ಕ್ಷೇತ್ರಗಳ ಬಗ್ಗೆ ನಮ್ಮ ಅಭಿಪ್ರಾಯವನ್ನು ಪಕ್ಷದ ವರಿಷ್ಠರಿಗೆ ತಿಳಿಸಿದ್ದೇವೆ. ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವುದು ಕೇಂದ್ರ ನಾಯಕತ್ವಕ್ಕೆ ಬಿಟ್ಟದ್ದು” ಎಂದು ತಿಳಿಸಿದ್ದಾರೆ.

ಈ ಎರಡು ಕ್ಷೇತ್ರಗಳಲ್ಲಿ ಗಾಂಧಿ ಕುಟುಂಬದವರು ಸ್ಪರ್ಧಿಸಬೇಕು ಎಂದು ಕಳೆದ ವಾರ ಉತ್ತರ ಪ್ರದೇಶ ಕಾಂಗ್ರೆಸ್ ಮುಖಂಡರು ನಿರ್ಣಯ ಕೈಗೊಂಡಿದ್ದರು. ಕಾಂಗ್ರೆಸ್ ಪಕ್ಷ ವಯನಾಡ್ ಕ್ಷೇತ್ರದಿಂದ ಈಗಾಗಲೇ ರಾಹುಲ್ಗಾಂಧಿ ಹೆಸರನ್ನು ಪ್ರಕಟಿಸಿದೆ. ಆದರೆ ಅವರು ಅಮೇಥಿ ಕ್ಷೇತ್ರದಿಂದಲೂ ಸ್ಪರ್ಧಿಸಬೇಕು ಎಂಬ ಒತ್ತಡವಿದೆ. ಅಂತೆಯೇ ಸೋನಿಯಾಗಾಂಧಿಯವರಿಂದ ತೆರವಾಗುವ ರಾಯಬರೇಲಿ ಕೇತ್ರದಿಂದ ಪ್ರಿಯಾಂಕಾಗಾಂಧಿ ವಾದ್ರಾ ಸ್ಪರ್ಧಿಸಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ