Breaking News

KSRTC ಬಸ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಲಕ್ಷ ಹಣ ಜಪ್ತಿ

Spread the love

KSRTC ಬಸ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಲಕ್ಷ ಹಣ ಜಪ್ತಿ

ದಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಅಕ್ರಮ ಹಣ ಸಾಗಾಟಕ್ಕೆ ಕಡಿವಾಣ ಹಾಕಿದ್ದು, ಕೆ ಎಸ್ ಆರ‍್ ಟಿ ಸಿ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದ್ದಾರೆ.

KSRTC ಬಸ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಲಕ್ಷ ಹಣ ಜಪ್ತಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ.

ದಾಖಲೆಗಳಿಲ್ಲದೇ ಯಾವುದೇ ವಸ್ತು, ಹಣ ಸಾಗಿಸುವಂತಿಲ್ಲ. ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ದಾಖಲೆ ಇಲ್ಲದೇ 5 ಲಕ್ಷ ಹಣ ಸಾಗಿಸುತ್ತಿದ್ದ ಪ್ರಕರಣ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಬೆಳಕಿಗೆ ಬಂದಿದೆ.

ಬಸ್ ತಪಾಸಣೆ ನಡೆಸಿದ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ಹಣ ಜಪ್ತಿ ಮಾಡಿದ್ದಾರೆ. ಹುಬ್ಬಳ್ಳಿ ಮೂಲದ ಸೈಯ್ಯದ್ ಎಂಬಾತ ಈ ಹಣವನ್ನು ಲಕ್ಷ್ಮೀಶ್ವರಕ್ಕೆ ಕೊಂಡೊಯ್ಯುತ್ತಿದ್ದ ಎಂದು ತಿಳಿದುಬಂದಿದೆ. ಲಕ್ಷ್ಮೀಶ್ವರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ