Breaking News

SSLC ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಮಾರಾಮಾರಿ:

Spread the love

ಬೆಂಗಳೂರು, ಮಾ.28: ಎಸ್‌ಎಸ್‌ಎಲ್​ಸಿ(SSLC) ಪರೀಕ್ಷೆ ವೇಳೆ ಅಪ್ರಾಪ್ತ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು, ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆಬೆಂಗಳೂರಿನರಾಗಿಗುಡ್ಡ(Ragigudda) ಬಳಿ ನಿನ್ನೆ(ಮಾ.27) ನಡೆದಿದೆ. ನಿನ್ನೆ ಎಸ್‌ಎಸ್‌ಎಲ್​ಸಿ ಪರೀಕ್ಷೆ ಬರೆಯಲು ಬಂದ ವೇಳೆ ಈ ದುರ್ಘಟನೆ ನಡೆದಿದ್ದು,

ಬೇರೆ ಬೇರೆ ಏರಿಯಾದಿಂದ ವಿದ್ಯಾರ್ಥಿಗಳು ರಾಗಿಗುಡ್ಡದ ಪರಿಕ್ಷಾ ಕೇಂದ್ರವಾದ ಖಾಸಗಿ ಶಾಲೆಗೆ ಬಂದಿದ್ದರು. ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ರಾಗಿಗುಡ್ಡ ಮತ್ತು ಸಾರಕ್ಕಿ ಏರಿಯಾ ವಿದ್ಯಾರ್ಥಿಗಳ ನಡುವೆ ಗಲಾಟೆ ಶುರುವಾಗಿದೆ.SSLC ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಮಾರಾಮಾರಿ: ಗಲಾಟೆಯಲ್ಲಿ ಮೂವರಿಗೆ ಚಾಕು ಇರಿತ

 

ಬಳಿಕ ಪರಿಕ್ಷೆ ಮುಗಿಸಿಕೊಂಡು ಹೋಗುವಾಗ ಮತ್ತೆ ಜಗಳವಾಗಿದ್ದು, ಗಲಾಟೆಯಲ್ಲಿ ಸಾರಕ್ಕಿಯ ಮೂವರು ವಿದ್ಯಾರ್ಥಿಗಳಿಗೆ ರಾಗಿ ಗುಡ್ಡದ ವಿದ್ಯಾರ್ಥಿಗಳು ಚಾಕು ಇರಿದಿದ್ದಾರೆ. ಈ ಕುರಿತು ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ