Breaking News
Home / ರಾಜಕೀಯ / ಅನಧಿಕೃತ ಆನ್‌ಲೈನ್ ಕೇಂದ್ರಕ್ಕೆ ಬೀಗ

ಅನಧಿಕೃತ ಆನ್‌ಲೈನ್ ಕೇಂದ್ರಕ್ಕೆ ಬೀಗ

Spread the love

ಟಪ್ರಭಾ: ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ಅನಧಿಕೃತ ಆನ್‌ಲೈನ್ ಕೇಂದ್ರದ ಮೇಲೆ ಗ್ರಾಮ ಆಡಳಿತಾಧಿಕಾರಿ ಹಾಗೂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ತಂಡ ದಾಳಿ ನಡೆಸಿ ಬೀಗ ಹಾಕಿದೆ.

ಅನಧಿಕೃತ ಆನ್‌ಲೈನ್ ಕೇಂದ್ರಕ್ಕೆ ಬೀಗ

ಸರ್ಕಾರದಿಂದ ಅನುಮತಿ ಪಡೆಯದೇ ಅರಭಾವಿ ಗ್ರಾಮದ ಆನಂದ ಕಡ್ಡಿ ಎಂಬುವವರಿಗೆ ಸೇರಿದ ಕೇಂದ್ರ ಕೆಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿತ್ತು.

ಆಧಾರ್, ಪಡಿತರ, ಪಾನ್ ತಿದ್ದುಪಡಿ ಹಾಗೂ ಹೊಸ ಅರ್ಜಿಗಳನ್ನು ಪಡೆಯಲು ಸಾರ್ವಜನಿಕರಿಂದ ನಿಗದಿಗಿಂತ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿರುವ ಕುರಿತು ಸಾರ್ವಜನಿಕರು ತಹಶೀಲ್ದಾರ್‌ಗೆ ದೂರು ನೀಡಿದ್ದರು.

ಗ್ರಾಮ ಆಡಳಿತಾಧಿಕಾರಿ ಬಿ.ಎಲ್.ಕೆಂಚರಡ್ಡಿ, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಯಲ್ಲಪ್ಪ ಮೂಡಲಗಿ ಹಾಜರಿದ್ದು, ಮೇಲಧಿಕಾರಿಗಳಿಗೆ ಮಾಹಿತಿ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ