Breaking News

ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಬರದಿಂದಾಗಿ ಕೆರೆ, ಹೊಳೆ, ಹಳ್ಳ, ಬೋರ್‌ವೆಲ್‌ಗಳು ಬತ್ತಿವೆ.

Spread the love

ಚಿಕ್ಕೋಡಿ: ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಬರದಿಂದಾಗಿ ಕೆರೆ, ಹೊಳೆ, ಹಳ್ಳ, ಬೋರ್‌ವೆಲ್‌ಗಳು ಬತ್ತಿವೆ. ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ಕಲ್ಲಂಗಡಿ, ಅರಿಸಿನ ಮುಂತಾದವುಗಳ ಇಳುವರಿ ಕುಸಿಯಲು ಇದು ಕಾರಣವಾಗಿದೆ.

ಚಿಕ್ಕೋಡಿ | ಬರದ ಬರೆ: ಬಾಡಿದ ತೋಟಗಾರಿಕೆ ಬೆಳೆ

ಅಥಣಿ ತಾಲ್ಲೂಕಿನಲ್ಲಿ ದ್ರಾಕ್ಷಿ, ಚಿಕ್ಕೋಡಿ ತಾಲ್ಲೂಕಿನಲ್ಲಿ ಕಲ್ಲಂಗಡಿ, ಕಾಗವಾಡ ತಾಲ್ಲೂಕಿನಲ್ಲಿ ಹಸಿ ಮೆಣಸಿನಕಾಯಿ, ರಾಯಬಾಗ ತಾಲ್ಲೂಕಿನಲ್ಲಿ ಅರಿಸಿನ, ನಿಪ್ಪಾಣಿ ತಾಲ್ಲೂಕಿನಲ್ಲಿ ತರಕಾರಿ ಹೆಚ್ಚಾಗಿ ಬೆಳೆದಿದ್ದಾರೆ.

ನೀರಿಲ್ಲದೇ ತೋಟಗಾರಿಕೆ ಬೆಳೆಯ ಇಳುವರಿ ಈ ಬಾರಿ ಕುಂಠಿತವಾಗಿದೆ. ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡು ಬೆಳೆದವರಿಗೆ ಅಷ್ಟೇನೂ ತೊಂದರೆ ಇಲ್ಲ.

ಪ್ರತಿ ವರ್ಷಕ್ಕೆ ಹೋಲಿಸಿದರೆ ತೋಟಗಾರಿಕೆ ಬೆಳೆಯ ಪ್ರಮಾಣದಲ್ಲಿ ಈ ವರ್ಷ ಶೇ 10ರಿಂದ ಶೇ15 ರಷ್ಟು ಕಡಿಮೆಯಾಗಿದೆ ಎಂದು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ. ಹೀಗಾಗಿ ಏಪ್ರಿಲ್, ಮೇ, ಜೂನ್ ತಿಂಗಳಲ್ಲಿ ತರಕಾರಿ ಹಾಗೂ ಹಣ್ಣುಗಳ ಲಭ್ಯತೆ ಕಡಿಮೆಯಾಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ