Breaking News

BJP: ಬಿಜೆಪಿ ಸ್ಟಾರ್‌ ಪ್ರಚಾರಕರ ಪಟ್ಟಿಯಿಂದ ಈಶ್ವರಪ್ಪ, ಅನಂತ್‌ ಹೆಗಡೆಗಿಲ್ಲ ಅವಕಾಶ

Spread the love

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಟಿಕೆಟ್‌ ವಂಚಿತರಾದ ನಳಿನ್‌ ಕುಮಾರ್‌ ಕಟೀಲು ಹಾಗೂ ಪ್ರತಾಪಸಿಂಹ ಅವರಿಗೆ ಅವಕಾಶ ನೀಡಿದೆ. ಆದರೆ ವರಿಷ್ಠರ ವಿರುದ್ಧ ಮುನಿಸಿಕೊಂಡಿರುವ ಅನಂತ್‌ ಕುಮಾರ್‌ ಹೆಗಡೆ ಹಾಗೂ ಕೆ.ಎಸ್‌.ಈಶ್ವರಪ್ಪ ಅವರನ್ನು ಪರಿಗಣಿಸದೆ ನಿರ್ಲಕ್ಷಿಸಿದೆ.

BJP: ಬಿಜೆಪಿ ಸ್ಟಾರ್‌ ಪ್ರಚಾರಕರ ಪಟ್ಟಿಯಿಂದ ಈಶ್ವರಪ್ಪ, ಅನಂತ್‌ ಹೆಗಡೆಗಿಲ್ಲ ಅವಕಾಶ

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಹಿತ 40 ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಕರ್ನಾಟಕದಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ರಾಜನಾಥ್‌ ಸಿಂಗ್‌, ನಿತಿನ್‌ ಗಡ್ಕರಿ, ಬಿ.ಎಸ್‌.ಯಡಿಯೂರಪ್ಪ, ಯೋಗಿ ಆದಿತ್ಯನಾಥ್‌, ಹಿಮಂತ್‌ ಬಿಸ್ವಾಸ್‌ ಶರ್ಮಾ ಪಟ್ಟಿಯಲ್ಲಿರುವ ಪ್ರಮುಖರಾಗಿದ್ದಾರೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ನಿರಂತರ ವಾಗ್ಧಾಳಿ ನಡೆಸುತ್ತಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕೂಡ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಉಳಿದಂತೆ ಪಟ್ಟಿ ಹೀಗಿದೆ:

ಬಿ.ವೈ.ವಿಜಯೇಂದ್ರ, ಎಸ್‌.ಜೈಶಂಕರ್‌, ನಿರ್ಮಲಾ ಸೀತಾರಾಮನ್‌, ಪ್ರಹ್ಲಾದ್‌ ಜೋಷಿ, ಸ್ಮೃತಿ ಇರಾನಿ, ಶೋಭಾ ಕರಂದ್ಲಾಜೆ, ಎ.ನಾರಾಯಣ ಸ್ವಾಮಿ, ಆರ್‌.ಅಶೋಕ್‌, ಕೆ.ಅಣ್ಣಾಮಲೈ, ಡಾ| ರಾಧಾಮೋಹನ್‌ ದಾಸ್‌ ಅಗರ್ವಾಲ್‌, ಡಾ| ಪ್ರಮೋದ್‌ ಸಾವಂತ್‌, ದೇವೇಂದ್ರ ಫಡ್ನವೀಸ್‌, ಬಸವರಾಜ ಬೊಮ್ಮಾಯಿ, ಸುಧಾಕರ್‌ ರೆಡ್ಡಿ ,ಡಿ.ವಿ.ಸದಾನಂದ ಗೌಡ, ಜಗದೀಶ ಶೆಟ್ಟರ್‌, ಸಿ.ಟಿ.ರವಿ, ಗೋವಿಂದ ಕಾರಜೋಳ, ಡಾ| ಸಿ.ಎನ್‌.ಅಶ್ವತ್ಥ ನಾರಾಯಣ, ಬಿ.ಶ್ರೀರಾಮುಲು, ಅರವಿಂದ ಲಿಂಬಾವಳಿ, ವಿ.ಸುನೀಲ್‌ ಕುಮಾರ್‌, ಜಿ.ವಿ. ರಾಜೇಶ್‌, ಪಿ.ರಾಜೀವ್‌, ಜೆ.ಪ್ರೀತಂ ಗೌಡ, ಬೈರತಿ ಬಸವರಾಜು, ಪ್ರಮೋದ್‌ ಮಧ್ವರಾಜ್‌, ಛಲವಾದಿ ನಾರಾಯಣ ಸ್ವಾಮಿ, ಎನ್‌.ಮಹೇಶ್‌ ಹೆಸರು ಪಟ್ಟಿಯಲ್ಲಿದೆ. \


Spread the love

About Laxminews 24x7

Check Also

ನಿರ್ಮಲಾ ಸೀತಾರಾಮನ್‌ ಭೇಟಿ ಮಾಡಿದ ಸಿಎಂ

Spread the loveನಿರ್ಮಲಾ ಸೀತಾರಾಮನ್‌ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ಅಲ್ಪಾವಧಿ ಕೃಷಿ ಸಾಲದ ಮಿತಿ ಹೆಚ್ಚಿಸುವಂತೆ ಮನವಿಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ