Breaking News

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಶಿಕ್ಷಕಿಗೆ ಜ್ಞಾನಯೋಗಿ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ

Spread the love

ಮೈಸೂರು : ನಂಜನಗೂಡು ತಾಲ್ಲೂಕಿನ ಹುರ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಶಿಕ್ಷಕಿ ಪದ್ಮ ನೆಲ್ಲಿತಾಳಪುರ ಅವರಿಗೆ ಜ್ಞಾನ ಯೋಗಿ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ ಲಭಿಸಿದೆ.

ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆ, ವಿಶ್ವ ಕನ್ನಡ ಕಲಾ ಸಂಸ್ಥೆ ವತಿಯಿಂದ ಬೆಂಗಳೂರಿನ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ನಡೆದ ವಿಶ್ವಕನ್ನಡ ಪ್ರಥಮ ರಾಜ್ಯಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸಾಧಕೀಯರನ್ನು ಗುರುತಿಸಿ ಸುಮಾರು 29 ಮಹಿಳಾ ಸಾಧಕೀಯರಿಗೆ ಪ್ರಶಸ್ತಿ ನೀಡಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ, ವಿಶ್ವ ಕನ್ನಡ ಪ್ರಥಮ ರಾಜ್ಯಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನ ಮತ್ತು ಪುಸ್ತಕ ಲೋಕಾರ್ಪಣೆ, ಸಾಧಕರಿಗೆ ಸನ್ಮಾನ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಿಕ್ಷಕಿ ಪದ್ಮ ನೆಲ್ಲಿತಾಳಪುರ ಅವರನ್ನು ಗುರುತಿಸಿ ಜ್ಞಾನಯೋಗಿ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೈ‌.ಬಿ‌.ಹೆಚ್ ಜಯದೇವ್, ಸಮ್ಮೇಳನದ ಅಧ್ಯಕ್ಷೆ ಕಮಲಾರಾಜೇಶ್, ಗೌರವಾಧ್ಯಕ್ಷ ಆರ್ ಶೈಲಜಾ ಬಾಬು, ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಈ ರವೀಶ್ ಪ್ರಶಸ್ತಿ ನೀಡಿ ಅಭಿನಂದಿಸಿದ್ದಾರೆ.


Spread the love

About Laxminews 24x7

Check Also

ಅತ್ಯಾಚಾರ, ದರೋಡೆ ಪ್ರಕರಣ: ಆರೋಪಿ ಮೇಲೆ ಕಿತ್ತೂರು ಪಿಎಸ್ಐ ಫೈರಿಂಗ್

Spread the love ಬೆಳಗಾವಿ: ದರೋಡೆ, ಅತ್ಯಾಚಾರ ಪ್ರಕರಣದಡಿ ಪರಿಶೀಲನೆ ಮಾಡುತ್ತಿದ್ದ ಪೊಲೀಸರ ಮೇಲೆ ಆರೋಪಿ ಹಲ್ಲೆಗೆ ಯತ್ನಿಸಿದ ಹಿನ್ನೆಲೆ ಆತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ