Breaking News

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯಿದೆ: ಶರದ್ ಪವಾರ್

Spread the love

ಮುಂಬೈ: ಶಾಂತಿ ಮತ್ತು ಸಹೋದರತ್ವವನ್ನು ಖಚಿತಪಡಿಸಿಕೊಳ್ಳಲು ದೇಶದ ಸಂವಿಧಾನವನ್ನು ರಕ್ಷಿಸುವ ಅಗತ್ಯವಿದೆ ಎಂದು ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ ಶರದ್‌ ಪವಾರ್ ಹೇಳಿದರು.

ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿಯ ಕೆಲ ನಾಯಕರು ಸಂವಿಧಾನದ ಬದಲಾವಣೆ ಮಾಡುವ ಮಾತುಗಳನ್ನಾಡುತ್ತಿದ್ದಾರೆ.ಇಂತಹ ಹೇಳಿಕೆಗಳು ಕಳವಳಕಾರಿಯಾಗಿದೆ’ ಎಂದು ಸಂಸದ ಅನಂತಕುಮಾರ್‌ ಹೆಗಡೆ ಹೇಳಿಕೆಯನ್ನು ಉಲ್ಲೇಖಿಸಿದರು.

‘ಒಬ್ಬ ವ್ಯಕ್ತಿಯ ಹಿತಕ್ಕಾಗಿ ಇಡೀ ದೇಶದ ಪ್ರಜಾಪ್ರಭುತ್ವವನ್ನೇ ನಾಶಪಡಿಸಿದ ನೆರೆಹೊರೆಯ ಕೆಲ ದೇಶಗಳ ಸ್ಥಿತಿ ನಮ್ಮ ದೇಶಕ್ಕೆ ಎಂದಿಗೂ ಬರಬಾರದು ‘ಎಂದರು.

‘ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಮುಖ್ಯಮಂತ್ರಿಯೊಬ್ಬರು ಜೈಲಿನಲ್ಲಿದ್ದಾರೆ. ಇನ್ನೂ ಅನೇಕರು ಇದೇ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಒಗ್ಗಟ್ಟಿನಿಂದ ಈ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ’ ಎಂದು ಹೇಳಿದರು.


Spread the love

About Laxminews 24x7

Check Also

7ನೇ ದಿನಕ್ಕೆ ಕಾಲಿಟ್ಟ ಕಬ್ಬು ಹೋರಾಟಗಾರರ ಪ್ರತಿಭಟನೆ

Spread the loveಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ