ಲೋಕಸಭೆ ಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಆದರೆ, ಸರ್ಕಾರಿ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಜಾರಿ ಮಾಡದಿರುವುದು ಸ್ಪಷ್ಟವಾಗಿದೆ. ಹಲವಾರು ಆಡಳಿತ ಪಕ್ಷದ ಶಾಸಕರ ಕಚೇರಿಗಳಲ್ಲಿ ಪಕ್ಷದ ಚಟುವಟಿಕೆಗಳು ಇನ್ನೂ ನಡೆಯುತ್ತಿವೆ ಎಂದು ಚುನಾವಣಾಧಿಕಾರಿಗಳಿಗೆ ಬಿಜೆಪಿ ಮಾಹಿತಿ ನೀಡಿದೆ.

“ವಿಧಾನಸೌಧ ಮತ್ತು ವಿಕಾಸಸೌಧದಲ್ಲಿರುವ ತಮ್ಮ ಕಚೇರಿಗಳಿಂದಲೇ ಸಚಿವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಮಾರ್ಚ್ 25 ರಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಕಾಸ ಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದು ಒಂದು ಉದಾಹರಣೆಯಾಗಿದೆ. ಚುನಾವಣಾ ಆಯೋಗವು ತಕ್ಷಣವೇ ಮಂತ್ರಿಗಳ ಕಚೇರಿಗಳನ್ನು ಮುಚ್ಚಬೇಕು” ಎಂದು ದೂರು ಪತ್ರದಲ್ಲಿ ತಿಳಿಸಿದೆ.
ಸಚಿವರು ಮತ್ತು ಶಾಸಕರು ಸರ್ಕಾರಿ ಕಟ್ಟಡಗಳಲ್ಲಿ ಯಾವುದೇ ರಾಜಕೀಯ ಚಟುವಟಿಕೆ ನಡೆಸದಂತೆ ನಿರ್ಬಂಧಿಸಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ನಿಯಮ ಉಲ್ಲಂಘಿಸಿ ಇಂತಹ ಚಟುವಟಿಕೆಗಳಿಗೆ ಅವಕಾಶ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.
Laxmi News 24×7