Breaking News

ಇಷ್ಟಾರ್ಥಸಿದ್ಧಿಯ ಚಾಂಗದೇವನ ಯಮನೂರು ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರೋ ಪುಣ್ಯ ಭೂಮಿ! ಸ್ಥಳ ಮಹಾತ್ಮೆ ಏನು?

Spread the love

12 ನೇ ಶತಮಾನದಲ್ಲಿ ಜೀವಿಸಿದ್ದ ಚಾಂಗದೇವ ಮುಸ್ಲಿಂ ಆಗಿದ್ದರೂ ಆತನಿಗೆ ಇಲ್ಲಿ ದೇವಸ್ಥಾನ ನಿರ್ಮಿಸಿದ್ದು ಭಾವೈಕ್ಯತೆಯ ಸಂಕೇತವೇ. ಒಂದು ಕಡೆ ಆತನಿಗೆ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿದರೆ, ಜಾತ್ರೆಯ ಎರಡನೇ ದಿನ ಅದೇ ಚಾಂಗದೇವನ ಹೆಸರಿನಲ್ಲಿ ಇದೇ ದೇವಸ್ಥಾನದ ಮುಂದೆ ಉರುಸು ಕೂಡ ನೆರವೇರುತ್ತೆ.
ಇನ್ನು ಈ ಚಾಂಗದೇವನಿಗೆ ಇಷ್ಟಾರ್ಥಸಿದ್ಧಿ ದೇವ ಅಂತಾನೂ ಕರೆಯಲಾಗುತ್ತೆ.ಅದೊಂದು ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರೋ ಪುಣ್ಯ ಸ್ಥಳ. ಭಾವೈಕ್ಯತೆಯನ್ನು ನಾಡಿಗೆ ಸಾರಿ ಹೇಳಿದ ಪುಣ್ಯ ಭೂಮಿಯದು (Spiritual). ಅಂಥ ಸ್ಥಳದಲ್ಲಿಂದು ಜಾತ್ರೆಯ ಸಂಭ್ರಮ. ಹಿಂದೂ-ಮುಸ್ಲಿಂ ಸಮುದಾಯದವರೆಲ್ಲಾ ಸೇರಿ ಬಲು ಸಂಭ್ರಮದಿಂದ ನಡೆಸೋ ಈ ಜಾತ್ರೆಯಲ್ಲಿ ಹಲವಾರು ಪವಾಡಗಳೂ ನಡೆಯುತ್ತವೆ ಅನ್ನೋ ನಂಬಿಕೆಯೂ ಜನರಲ್ಲಿದೆ. ಹಾಗಾದ್ರೆ ಯಾವುದಾ ಜಾತ್ರೆ? ಅಲ್ಲಿನ ವಿಶೇಷತೆಗಳೇನು? ಬನ್ನಿ ನೋಡೋಣ. ಕಣ್ಣು ಹೊರಳಿಸಿದಷ್ಟೂ ಕಾಣೋ ಜನ ಸಾಗರ; ದೇವರ ದರ್ಶನಕ್ಕಾಗಿ ನಿಂತು ಕೊಂಡ ಸಾವಿರಾರು ಜನ ಭಕ್ತರು; ಹಳ್ಳದಲ್ಲಿ ನಿಂತುಕೊಂಡ ನೀರಿನಲ್ಲಿಯೇ ಸ್ನಾನ ಮಾಡುತ್ತಿರೋ ಭಕ್ತರು- ಇದೆಲ್ಲಾ ಕಂಡು ಬಂದಿದ್ದು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರು ಗ್ರಾಮದ ಜಾತ್ರೆಯಲ್ಲಿ (Changdev Yamanur Hindu Muslim harmony).

ಗ್ರಾಮದ ಚಾಂಗದೇವರ ಜಾತ್ರೆಯೇ ಒಂದು ವಿಶೇಷ. ನೂರಾರು ವರ್ಷಗಳ ಹಿಂದೆ ಚಾಂಗದೇವ ಈ ಗ್ರಾಮದಲ್ಲಿ ನೆಲೆಸಿದ್ದ ಅನ್ನೋ ಪ್ರತೀತಿ ಇದೆ. ಅವತಾರ ಪುರುಷನಾಗಿದ್ದ ಆತ ಸಂತ ಪರಂಪರೆಯ ಮಹಾಜ್ಞಾನಿಯಾಗಿ ಸಂಚರಿಸುತ್ತಾ, ಹಿಂದೂ-ಮುಸ್ಲಿಮರಲ್ಲಿ ಭಾವೈಕ್ಯತೆಯನ್ನು ಮೂಡಿಸಿದ. ಇಂಥ ಮಹಿಮಾ ಪುರುಷನ ಸ್ಮರಣೆಗಾಗಿ ಇಂದಿಗೂ ಜಾತ್ರೆಯನ್ನು ಮಾಡಲಾಗುತ್ತಿದೆ. ಒಂದು ಕಡೆ ದೇವಸ್ಥಾನವಿದ್ದರೆ, ಮತ್ತೊಂದು ಭಾಗದಲ್ಲಿ ಮಸೀದಿ ಇರೋದೇ ಇಲ್ಲಿಯ ವಿಶೇಷತೆ. ದೇವಸ್ಥಾನದಲ್ಲಿ ಚಾಂಗದೇವ ಪ್ರತಿಷ್ಠಾಪಿಸಿದ ಉಗ್ರ ನರಸಿಂಹ ದೇವ ಸಾಲಿಗ್ರಾಮಕ್ಕೆ ವಿಶೇಷ ಪೂಜೆ ಮಾಡಲಾಗುತ್ತೆ. ಜಾತ್ರೆಗೆ ಲಕ್ಷಾಂತರ ಜನರು ಆಗಮಿಸಿ, ಚಾಂಗದೇವನ ದರ್ಶನ ಪಡೆಯುತ್ತಾರೆ.

ಇಷ್ಟಾರ್ಥಸಿದ್ಧಿಯ ಚಾಂಗದೇವನ ಯಮನೂರು ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರೋ ಪುಣ್ಯ ಭೂಮಿ! ಸ್ಥಳ ಮಹಾತ್ಮೆ ಏನು?

ಜಾತ್ರೆಯ ಮೊದಲ ದಿನ ಚಾಂಗದೇವನಿಗೆ ಗಂಧಾಭಿಷೇಕ ಮಾಡಲಾಗುತ್ತದೆ. ಬಳಿಕ ಬೆಣ್ಣೆ ಹಳ್ಳದ ನೀರಿನಿಂದಲೇ ಸಂತರು ದೀಪ ಬೆಳಗಿಸಿ ಪವಾಡ ಮೆರೆಯುತ್ತಾರೆ ಅನ್ನೋ ನಂಬಿಕೆ. ಇದನ್ನು ನೋಡಲು ಹೊರ ರಾಜ್ಯದಿಂದಲೂ ಭಕ್ತರು ಆಗಮಿಸುತ್ತಾರೆ. ಬೆಣ್ಣೆ ಹಳ್ಳದಿಂದ ಮೆರವಣಿಗೆ ಮೂಲಕ ನೀರನ್ನು ತರೋ ಸಂತರು, ಅದೇ ನೀರಿನಿಂದ ದೇವಸ್ಥಾನದಲ್ಲಿರೋ ದೀಪವನ್ನು ಬೆಳಗಿಸುತ್ತಾರೆ ಅನ್ನೋ ನಂಬಿಕೆ ಇದೆ.

ಇನ್ನು ಈ ಬೆಣ್ಣೆ ಹಳ್ಳದ ನೀರಿನಲ್ಲಿ ಸ್ನಾನ ಮಾಡಿದರೆ ಚರ್ಮ ರೋಗ ನಿವಾರಣೆ ಆಗುತ್ತೆ ಅನ್ನೋ ನಂಬಿಕೆಯ ಹಿನ್ನೆಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಇದೇ ನೀರಿನಲ್ಲಿ ಸ್ನಾನ ಮಾಡುತ್ತಾರೆ. ಈ ಬಾರಿ ಮಳೆಯ ಕೊರತೆಯಿಂದಾಗಿ ಹಳ್ಳದಲ್ಲಿ ನೀರಿರದಿದ್ದರೂ ನಿಂತ ಕೊಂಚ ನೀರಿನಲ್ಲಿಯೇ ಭಕ್ತರು ಸ್ನಾನ ಮಾಡಬೇಕಾದ ಅನಿವಾರ್ಯತೆ ಎದುರಾಗಿತ್ತು. ಆದರೂ ಭಕ್ತರು ಭಾವಪರವಶರಾಗಿ ಸ್ನಾನ ಮಾಡಿದ್ದು, ವಿಶೇಷವಾಗಿತ್ತು. ಇನ್ನು ಭಕ್ತರು ಸ್ನಾನ ಮಾಡಿದ ಬಳಿಕ ಹಳೆಯ ಬಟ್ಟೆಯನ್ನು ಅದೇ ಹಳ್ಳದಲ್ಲಿಯೇ ಬಿಟ್ಟು ಹೋಗಬೇಕು ಅನ್ನೋದು ನಿಯಮ.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ