Breaking News

ಬೆಂಗಳೂರಿನಲ್ಲಿ ಬೆಳಗಾವಿ ಬಿಜೆಪಿ ನಾಯಕರು ಲಾಬಿಗೆ ಮುಂದಾಗಿದ್ದಾರೆ.

Spread the love

ಬೆಂಗಳೂರು: ರಾಜ್ಯಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜಧಾನಿ ಬೆಂಗಳೂರಿನಲ್ಲಿ ಬೆಳಗಾವಿ ಬಿಜೆಪಿ ನಾಯಕರು ಲಾಬಿಗೆ ಮುಂದಾಗಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆ ತಮ್ಮ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ಗಾಗಿ ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ.
ನಿನ್ನೆಯಷ್ಟೇ ಯಡಿಯೂರಪ್ಪ ಅವರಿಗೆ ಭೇಟಿಯಾಗಿದ್ದ ಉಮೇಶ ಕತ್ತಿ ಅವರು ಇಂದು ಕೂಡ ಬೆಳ್ಳಂ ಬೆಳಿಗ್ಗೆ ಸಿಎಂ ನಿವಾಸಕ್ಕೆ ತೆರಳಿ ಅರ್ಧ ಗಂಟೆಗೂ ಹೆಚ್ಚು ಕಾಲ ಮತ್ತೆ ಚರ್ಚೆ ನಡೆಸಿದ್ದಾರೆ.  ಯಡಿಯೂರಪ್ಪನವರ ಸರ್ಕಾರಿ ನಿವಾಸ ಕಾವೇರಿಗೆ ತೆರಳಿರುವ ಉಮೇಶ್ ಕತ್ತಿ ಮತ್ತೊಮ್ಮೆ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭಾ ಚುನಾವಣೆಯ ಟಿಕೆಟ್ ಕೊಡುವಂತೆ ಉಮೇಶ್ ಕತ್ತಿ ಸಿಎಂ ಮೇಲೆ ಒತ್ತಡ ಹೇರಿದ್ದಾರೆ. ವಾಕಿಂಗ್ ಮೂಡ್ ನಲ್ಲಿದ್ದ ವೇಳೆ ಸಿಎಂ ಜೊತೆಗೆ ಉಮೇಶ್ ಕತ್ತಿ ಚರ್ಚೆ ನಡೆಸಿದ್ದಾರೆ.
ನಿನ್ನೆ ರಾತ್ರಿ ಬೆಳಗಾವಿ ಭಾಗದ ಶಾಸಕರ ಜೊತೆ ಸಚಿವ ರಮೇಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ನಡೆಸಿದ್ದರು. ಮಲ್ಲೇಶ್ವರಂನಲ್ಲಿರುವ ಅಪಾರ್ಟ್​ಮೆಂಟ್​ನಲ್ಲಿ ರಮೇಶ್ ಜಾರಕಿಹೊಳಿ ನಿನ್ನೆ ರಾತ್ರಿ ಭೋಜನಕೂಟ ಆಯೋಜಿಸಿದ್ದರು. ಇದರಲ್ಲಿ ಬಿಜೆಪಿಯ ಕೆಲವು ಸಚಿವರು, ಶಾಸಕರು ಪಾಲ್ಗೊಂಡಿದ್ದರು. ರಾಜ್ಯಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆ ಈ ಡಿನ್ನರ್ ಮೀಟಿಂಗ್ ಕುತೂಹಲಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿರುವ ಉಮೇಶ್ ಕತ್ತಿ ರಾಜ್ಯಸಭಾ ಟಿಕೆಟ್ ಬಗ್ಗೆ ಚರ್ಚಿಸಿದ್ದಾರೆ.
ಒಟ್ಟಾರೆ ಬೆಳಗಾವಿ ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ಬಿಡು ಬಿಟ್ಟಿದ್ದು ತಮ್ಮ ಬೆಂಬಲಿತ ಅಭ್ಯರ್ಥಿಗೆ ರಾಜ್ಯಸಭಾ ಟಿಕೆಟ್ ಗಿಟ್ಟಿಸಿಕೊಳ್ಳಲು  ತೀವ್ರ ಲಾಬಿಗೆ ಮುಂದಾಗಿದ್ದಾರೆ.

Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ