Breaking News

ಪ್ರಧಾನಿ ಮೋದಿಯದ್ದು ಸುಳ್ಳಿನ ಪಿಕ್ಚರ್ ಬಾಕಿ ಇರಬಹುದು

Spread the love

ಮೈಸೂರು, ಏಪ್ರಿಲ್ 1: ಅಭಿವೃದ್ಧಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ನೀಡಿರುವ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಮೈಸೂರಿನಲ್ಲಿ (Mysuru) ತಿರುಗೇಟು ನೀಡಿದರು. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಆಗಿದ್ದರೆ ತಾನೇ ಟ್ರೇಲರ್. ಅವರದ್ದು (ಮೋದಿ) ಸುಳ್ಳಿನ ಪಿಕ್ಚರ್ ಬಾಕಿ ಇರಬಹುದು ಎಂದು ವ್ಯಂಗ್ಯವಾಡಿದರು. ಬಿಜೆಪಿ 400 ಸೀಟ್ ಗೆಲ್ಲಬೇಕು ಎಂಬ ಮೋದಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಚುನಾವಣೆಯಲ್ಲಿ ಬಿಜೆಪಿ 200 ಸೀಟ್​ ಗೆಲ್ಲುವುದು ಅನುಮಾನವಿದೆ. ಬಿಜೆಪಿಯ ಸಮೀಕ್ಷೆಯಿಂದಲೇ ಈ ವಿಚಾರ ಬಹಿರಂಗವಾಗಿದೆ. ಹೀಗಾಗಿ ಅವರು 400 ಸೀಟ್​ ಗೆಲ್ಲುತ್ತೇವೆಂದು ಬಿಂಬಿಸುತ್ತಿದ್ದಾರೆ ಎಂದರು.

ಕಡಿಮೆ ಸ್ಥಾನ ಬರುತ್ತದೆ ಎಂದು ಗೊತ್ತಾದ ಮೇಲೆಯೇ ಹೆಚ್ಚು ಸ್ಥಾನ ಬರುತ್ತವೆಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ‌. ಇದು ಕೂಡ ಅವರ ತಂತ್ರಗಾರಿಕೆ. ಕರ್ನಾಟಕದಲ್ಲಿ ನನಗೆ ವಿಶ್ವಾಸ ಇದೆ. 18ರಿಂದ 20 ಸ್ಥಾನ ಗೆಲ್ಲುತ್ತೇವೆ‌ ಎಂದು ಸಿದ್ದರಾಮಯ್ಯ ಹೇಳಿದರು.

ಈ ಬಾರಿ ಬಿಜೆಪಿಯ ಸುಳ್ಳಿಗೆ ಯಾರು ಸಹ ಮರಳಾಗುವುದಿಲ್ಲ. ಮೋದಿಯೂ ಬಂದು ಪ್ರಚಾರ ಮಾಡಲಿ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದ್ದರು. ಆಗ ಏನಾಯಿತು ಎಂಬುದು ಗೊತ್ತಿದೆ. ಈಗಲೂ ಮಾಡಲಿ ಬಿಡಿ ಎಂದು ಅವರು ಹೇಳಿದರು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ