Breaking News

ಟೀಕೆ-ಟಿಪ್ಪಣಿಗೆ ಪ್ರತಿಕ್ರಿಯೆ ಕೊಡುವುದಿಲ್ಲ: ಜಗದೀಶ ಶೆಟ್ಟರ್

Spread the love

ಬೆಳಗಾವಿ: ‘ಇದು ರಾಷ್ಟ್ರೀಯ ವಿಚಾರಧಾರೆಗಳ ಆಧಾರದಲ್ಲಿ ನಡೆಯುವ ಚುನಾವಣೆ. ಇಲ್ಲಿ ರಾಷ್ಟ್ರೀಯ ವಿಚಾರಗಳೇ ಚರ್ಚೆಯಾಗಬೇಕು. ಆದರೆ, ಕಾಂಗ್ರೆಸ್‌ನವರಿಂದ ಸಣ್ಣ-ಪುಟ್ಟ ‌ವಿಷಯ ಚರ್ಚಿಸಲಾಗುತ್ತಿದೆ. ಇದಕ್ಕೆ ನಾವು ಉತ್ತರ ನೀಡುವುದಿಲ್ಲ’ ಎಂದು ಬೆಳಗಾವಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಹೇಳಿದರು.

 

ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ನನ್ನ ಕರ್ಮಭೂಮಿ. ಆದರೆ, ಕಾಂಗ್ರೆಸ್‌ನವರು ನಾನು ಹೊರಗಿನವನು ಎನ್ನುತ್ತಿದ್ದಾರೆ. ಅವರಿಗೆ ಚರ್ಚಿಸಲು ಯಾವುದೇ ವಿಷಯವೇ ಇಲ್ಲ. ಟೀಕೆ-ಟಿಪ್ಪಣಿಗೆ ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ. ಕೆಳಹಂತಕ್ಕೆ ಹೋಗಿ ನಾನು ಟೀಕೆ ಮಾಡುವುದಿಲ್ಲ’ ಎಂದರು.

ಟೀಕೆ-ಟಿಪ್ಪಣಿಗೆ ಪ್ರತಿಕ್ರಿಯೆ ಕೊಡುವುದಿಲ್ಲ: ಜಗದೀಶ ಶೆಟ್ಟರ್

‘ಪಕ್ಷದ ವರಿಷ್ಠರು ಮತ್ತು ಜನರ ತೀರ್ಮಾನದಂತೆ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸಿದ್ದೇನೆ. ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಜಾರಕಿಹೊಳಿ ಸಹೋದರರು ನನ್ನ ಜತೆಗೆ ಪ್ರಚಾರಕ್ಕೆ ಬಂದಿದ್ದರು. ಗೋಕಾಕ, ಅರಭಾವಿಯಲ್ಲಿ ಸಂಪೂರ್ಣವಾಗಿ ಬೆಂಬಲ ಕೊಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿನಿಧಿಯಾಗಿ ಇಲ್ಲಿ ಸ್ಪರ್ಧಿಸಿದ್ದೇನೆ. ಬೆಳಗಾವಿ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಬಸನಗೌಡ ಪಾಟೀಲ ಯತ್ನಾಳ, ಮುರುಗೇಶ ನಿರಾಣಿ ಸೇರಿದಂತೆ ಎಲ್ಲರೂ ಪ್ರಚಾರಕ್ಕೆ ಬರುತ್ತಾರೆ’ ಎಂದರು.

‘ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವುದನ್ನು ನಾವು ವಿರೋಧಿಸಿಲ್ಲ. ಅದನ್ನು ವಿರೋಧಿಸುವ ಪ್ರಶ್ನೆಯೇ ಉದ್ಭವಿಸಿಲ್ಲ. ಚುನಾವಣೆ ವೇಳೆ, ಬೇರೆ ಪಕ್ಷದವರಿಂದ ಈ ರೀತಿಯ ಅಪಪ್ರಚಾರ ನಡೆಯುತ್ತದೆ. ಇದಕ್ಕೆ ಯಾವುದೇ ಆಧಾರವಿಲ್ಲ. ಪಂಚಮಸಾಲಿ ಮೀಸಲಾತಿ ಬಗ್ಗೆ ಚರ್ಚೆ ಮಾಡಲ್ಲ‌’ ಎಂದರು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ