Breaking News

ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್‌ಗೆ ಕೊರೊನಾ ಪಾಸಿಟಿವ್..!

Spread the love

ನವದೆಹಲಿ, ಜೂ.4- ಭಾರತದ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್‌ಗೆ ಮಹಾಮಾರಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ನಾಲ್ಕು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಅವರು ಹೋಂ ಕ್ವಾರಂಟೈನ್ನಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಅಜಯ್ ಕುಮಾರ್ ವರದಿ ನೆಗೆಟಿವ್ ಬರುವವರೆಗೆ ಹೋಂ ಕ್ವಾರಂಟೈನ್ನಲ್ಲಿ ಇರಲಿದ್ದಾರೆ ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಆದರೆ ಇದರ ಬಗ್ಗೆ ಮಾಹಿತಿ ನೀಡಿಲು ಕೇಂದ್ರ ರಕ್ಷಣಾ ಸಚಿವರ ವಕ್ತಾರ ಹಿಂದೇಟು ಹಾಕಿದ್ದಾರೆ.

ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ರವರ ಕಾಂಟ್ಯಾಕ್ಟ್ ಟ್ರೇಸಿಂಗ್ ನಡೆಯುತ್ತಿದ್ದು, ಕಮ್ಮಿ ಅಂದರೂ 35 ಅಧಿಕಾರಿಗಳನ್ನ ಅವರು ಸಚಿವಾಲಯದಲ್ಲಿ ಭೇಟಿ ಮಾಡಿದ್ದಾರೆ. ಹೀಗಾಗಿ, ಸಚಿವಾಲಯದ ಸೌತ್ ಬ್ಲಾಕ್ ನಲ್ಲಿರುವ ಎಲ್ಲಾ ಅಧಿಕಾರಿಗಳನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಇನ್ನೂ ಆತಂಕಕಾರಿ ವಿಷಯ ಎಂದರೆ ಇದೇ ಅಜಯ್ ಕುಮಾರ್ ಕೂರುವ ರಕ್ಷಣಾ ಇಲಾಖೆ ಕಚೇರಿಯಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂರುವುದು.

ಅಷ್ಟೇ ಅಲ್ಲ, ಭೂಸೇನಾ ಮತ್ತು ಜಲಸೇನಾ ಮುಖ್ಯಸ್ಥರು ಕೂರುವುದು ಕೂಡ ಇದೇ ಕಚೇರಿಯಲ್ಲಿ. ವಿಷಯ ಗೊತ್ತಾಗುತ್ತಿದ್ದಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಚೇರಿಗೆ ಬರುವುದನ್ನು ನಿಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇದೇ ಕಚೇರಿಯಲ್ಲಿ ಒಟ್ಟು 35 ನೌಕರರು ಕೆಲಸ ಮಾಡುತ್ತಿದ್ದಾರೆ. ಎಲ್ಲರನ್ನೂ ಈಗ ಕೊರೋನಾ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ. ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಲು ರಕ್ಷಣಾ ಇಲಾಖೆಯ ವಕ್ತಾರರು ನಿರಾಕರಿಸಿದ್ದಾರೆ.

ಇದಕ್ಕೂ ಮೊದಲು ರಾಷ್ಟ್ರಪತಿ ಭವನದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ಕೆಲಸ ಮಾಡುವ 125 ಕುಟುಂಬಗಳನ್ನು ಕ್ವಾರಂಟೈನ್ ಮಾಡಲಾಗಿತ್ತು. ಅಲ್ಲಿಯ ಗಾರ್ಡನ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕೊರೋನಾ ಸೋಂಕು ಪತ್ತೆಯಾಗಿತ್ತು.

ಮಾಹಾಮಾರಿ ಕೊರೊನಾ ವೈರಸ್ ಹರಿಡಿರುವ ಉನ್ನತ ಸರ್ಕಾರಿ ಅಧಿಕಾರಿಗಳಲ್ಲಿ ಅಜಯ್ ಕುಮಾರ್ ಮೊದಲನೇಯವರಾಗಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇವರೊಂದಿಗೆ ಯಾವುದೇ ಸಭೆಯಲ್ಲಿ ಭಾಗಿಯಾಗಿಲ್ಲ ಎಂದು ತಿಳಿದು ಬಂದಿದೆ. ಆದರೆ ಇಲ್ಲಿ ಕೆಲಸ ಮಾಡುತ್ತಿರುವ 35 ಅಧಿಕಾರಿಗಳನ್ನ ಹೋಂ ಕ್ವಾರಂಟೈನ್ನಲ್ಲಿ ಇಡಲಾಗಿದೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಏಳು ಆರೋಪಿಗಳ ಪೈಕಿ ಇಬ್ಬರಿಗೆ ಶ್ಯೂರಿಟಿ ಸಿಕ್ಕಿಲ್ಲ.

Spread the loveಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿ ಜಾಮೀನು ಪಡೆದಿದ್ದ ಏಳು ಮಂದಿ ಆರೋಪಿಗಳ ಪೈಕಿ ಇಬ್ಬರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ