Breaking News

ಧುಪದಾಳ ಜಲಾಶಯಕ್ಕೆ ಸಚಿವ ಸತೀಶ ಜಾರಕಿಹೊಳಿ ಭೇಟಿ

Spread the love

ಬೆಳಗಾವಿ: ಗೋಕಾಕ ತಾಲೂಕಿನ ಧುಪದಾಳ ಗ್ರಾಮದಲ್ಲಿ ಘಟಪ್ರಭಾ ಹಾಗೂ ಹಿರಣ್ಯಕೇಶಿ‌ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಜಲಾಶಯಕ್ಕೆ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ನೀರಿನ‌ ಸಂಗ್ರಹದ ಸಾಮರ್ಥ್ಯವನ್ನು ಪರಿಶೀಲಿಸಿದರು. 

ಇದೇ ವೇಳೆ  ನೀರಿನ ಸಂಗ್ರಹ ಹೆಚ್ಚಿಗೆ ಮಾಡಲು ಯೋಜನೆ ರೂಪಿಸಲು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಧುಪದಾಳ ಜಲಾಶಯಕ್ಕೆ ಭೇಟಿ ನೀಡಿ ನೀರಿನ ಮಟ್ಟ ಪರಿಶೀಲಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಈ ವೇಳೆ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ ಅವರು, ಈ  ಜಲಾಶಯ   ಸಾಮರ್ಥ್ಯವನ್ನು ಹೆಚ್ಚಿಸುವುದರಿಂದ ರೈತರು ಹಾಗೂ ಸಾರ್ವಜನಿಕರಿಗೆ ಇದರಿಂದ ತುಂಬಾ ಅನುಕೂಲವಾಗಲಿದೆ. ಇದೇ ಸಂದರ್ಭದಲ್ಲಿ  ಜನ‌-ಜಾನುವಾರುಗಳ ಕುಡಿಯುವ ನೀರಿನ ಬವಣೆಯನ್ನು ನೀಗಿಸಲು ಏಪ್ರಿಲ್‌ 1 ರಿಂದ ಹಿಡಕಲ್ ಜಲಾಶಯದಿಂದ 2 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಹಾಗೂ ಮಳೆಯ ಕೊರತೆಯಿಂದಾಗಿ ಜನ- ಜಾನುವಾರುಗಳಿಗೆ ನೀರಿನ ಅಭಾವ ಉಂಟಾಗಿದ್ದು, ಹಿಡಕಲ್ ಜಲಾಶಯದಿಂದ ಘಟಪ್ರಭೆ ನದಿಗೆ ಕುಡಿಯುವ ಉದ್ದೇಶಕ್ಕಾಗಿ ಬಾಗಲಕೋಟ ಮತ್ತು ಮಾರ್ಗ ಮಧ್ಯದ ಹಳ್ಳಿಗಳಿಗೆ ಸರ್ಕಾರದ ಆದೇಶದನ್ವಯ ಕಾಯ್ದಿರಿಸಿದ 2. ಟಿ.ಎಂ.ಸಿ ನೀರನ್ನು ಹರಿಸಲಾಗುತ್ತಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ