ಧಾರವಾಡ: ಲೋಕಸಭಾ ಚುನಾವಣೆಗೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಮಾಡಬೇಕೋ ಅಥವಾ ಬೇಡವೋ ಎಂಬ ವಿಚಾರವಾಗಿ ಧಾರವಾಡದ ಸೇವಾಲಯಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಭಕ್ತರ ಸಭೆ ಕರೆದಿದ್ದರು. ಸ್ವಾಮೀಜಿಗಳು ಸೇವಾಲಯಕ್ಕೆ ಬರುತ್ತಿದ್ದಂತೆ ಭಕ್ತಗಣ ಹೂವಿನ ಹಾಸಿಗೆ ಮೇಲೆ ಅವರನ್ನು ಬರಮಾಡಿಕೊಂಡರು.
ನಾನು ಒಂದು ಗುರಿ ಇಟ್ಟುಕೊಂಡಿದ್ದು, ಆ ಗುರಿ ಮುಟ್ಟುವ ತನಕ ಕೊರಳಲ್ಲಿ ಮಾಲೆ ಹಾಕಿಕೊಳ್ಳುವುದಿಲ್ಲ ಎಂದು ಭಕ್ತರಿಗೆ ಇದೇ ಸಂದರ್ಭದಲ್ಲಿ ತಿಳಿಸಿದರು.

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಭಕ್ತರೊಂದಿಗೆ ಮಾತುಕತೆ ನಡೆಸಿದ ದಿಂಗಾಲೇಶ್ವರ ಸ್ವಾಮೀಜಿ, ಭಕ್ತರ ಅಭಿಪ್ರಾಯ ಸಂಗ್ರಹಿಸಿದರು. ಸಭೆಯಲ್ಲಿ ಎಲ್ಲ ಭಕ್ತರು, ದಿಂಗಾಲೇಶ್ವರ ಸ್ವಾಮೀಜಿಗಳು ಲೋಕಸಭಾ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧೆ ಮಾಡಬೇಕು ಎಂಬ ನಿರ್ಣಯ ಮಂಡಿಸಿದರು. ಅಲ್ಲದೇ ಚುನಾವಣೆ ಸಂಬಂಧ ಧಾರವಾಡ ಲೋಕಸಭಾ ಕ್ಷೇತ್ರದ ಮತದಾರರ ಹಿತರಕ್ಷಣಾ ಸಮಿತಿ ರಚನೆ ಮಾಡಲು ಸಭೆಯಲ್ಲಿ ನಿರ್ಣಯ ಕೈಗೊಂಡರು.
Laxmi News 24×7