ಲಿಂಗಸುಗೂರು:ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮೀ ಯೋಜನೆ 3 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜ್ ಭರವಸೆ ನೀಡಿದರು.
ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳು ಜಾರಿಗೊಂಡು ಮಹಿಳೆಯರು, ಬಡವರು, ನಿರುದ್ಯೋಗಿಗಳಿಗೆ ಆಸರೆಯಾಗಿವೆ.
ಕಳೆದ ಎಂಟು ತಿಂಗಳಲ್ಲಿ ಗ್ಯಾರಂಟಿ ಯೋಜನೆಗಳಿಗೆ 36 ಸಾವಿರ ಕೋಟಿ ರೂ. ಖರ್ಚು ಮಾಡಲಾಗಿದೆ. ಈ ವರ್ಷ 56 ಸಾವಿರ ಕೋಟಿ ರೂ. ಖರ್ಚು ಮಾಡಲಾಗುವುದು.
ಗೃಹಲಕ್ಷ್ಮೀ ಯೋಜನೆಯ 3 ಸಾವಿರ ರೂ.ಗೆ, ಗೃಹಜ್ಯೋತಿ 300 ಯುನಿಟ್‌ಗೆ ಹೆಚ್ಚಿಸಲಾಗುವುದು.
ಮಹಿಳೆಯರು ಎಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣ ಮಾಡುವ ಅವಕಾಶ ಒದಗಿಸುವ ಚಿಂತನೆ ಇದೆ ಎಂದರು.