ತೆಲಂಗಾಣ ಔಷಧ ಘಟಕ ಸ್ಫೋಟ

Spread the love

ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ಕಂಪನಿ ಘಟಕದ ರಾಸಾಯನಿಕ ರಿಯಾಕ್ಟರ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಜಿಲ್ಲೆಯ ಹತ್ತನೂರ ಮಂಡಲದ ಚಂದಾಪುರ ಗ್ರಾಮದಲ್ಲಿರುವ ಎಸ್‌ಬಿ ಆರ್ಗಾನಿಕ್ಸ್ ಲಿಮಿಟೆಡ್‌ನ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದರು.

ಗುರುವಾರ ಕಾರ್ಖಾನೆಯ ಆವರಣದಲ್ಲಿ ಅವಶೇಷಗಳಡಿ ಒಬ್ಬ ಕಾರ್ಮಿಕನ ಶವ ಪತ್ತೆಯಾಗಿದ್ದು, ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಬುಧವಾರ ರಾತ್ರಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಸಂಸ್ಥೆಯ ನಿರ್ದೇಶಕ ಮತ್ತು ಘಟಕದ ಕಾರ್ಮಿಕರೂ ಸೇರಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮೃತರು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಮಧ್ಯಪ್ರದೇಶ ಮೂಲದವರು.

ಘಟನೆಯಲ್ಲಿ ಗಾಯಗೊಂಡ 16 ಮಂದಿಯನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಸ್ಫೋಟಕ್ಕೆ ಕಾರಣವನ್ನು ತನಿಖೆ ನಡೆಸಲಾಗುತ್ತಿದ್ದು, ಕಂಪನಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


Spread the love

About Laxminews 24x7

Check Also

ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ: ಕ್ರೀಡಾ ಸಾಮರ್ಥ್ಯ ಬೆಳೆಸಿಕೊಳ್ಳಿ- ಕಡಾಡಿ

Spread the love ಬೆಳಗಾವಿ: ‘ಇಂದಿನ ಮಕ್ಕಳು ಮತ್ತು ಯುವಜನರು ವಿದ್ಯಾರ್ಥಿ ಹಂತದಿಂದಲೇ ಕ್ರೀಡಾ ಸಾಮರ್ಥ್ಯ ಬೆಳೆಸಿಕೊಳ್ಳಬೇಕು’ ಎಂದು ರಾಜ್ಯಸಭಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ