Breaking News

ಕುರುಡುಮಲೆ ದೇವಸ್ಥಾನದಿಂದ “ಪ್ರಜಾಧ್ವನಿ-2’ಕ್ಕೆ ನಾಳೆ ಚಾಲನೆ

Spread the love

ಬೆಂಗಳೂರು: ಕೋಲಾರ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಉಂಟಾದ ಗೊಂದಲದಿಂದ ಮುಂದೂಡಲ್ಪಟ್ಟಿದ್ದ ಕಾಂಗ್ರೆಸ್‌ನ ಲೋಕಸಭಾ ಚುನಾವಣ ಪ್ರಚಾರ ಕಾರ್ಯಕ್ರಮ ಶನಿವಾರ (ಎ. 6) ನಿಗದಿಯಾಗಿದ್ದು, ಅಂದು ಕುರುಡುಮಲೆ ದೇವಸ್ಥಾನದಿಂದ “ಪ್ರಜಾಧ್ವನಿ-2’ಕ್ಕೆ ಚಾಲನೆ ದೊರೆಯಲಿದೆ.

Congress: ಕುರುಡುಮಲೆ ದೇವಸ್ಥಾನದಿಂದ "ಪ್ರಜಾಧ್ವನಿ-2'ಕ್ಕೆ ನಾಳೆ ಚಾಲನೆ

ಅಂದು ಬೆಳಗ್ಗೆ 10.30ಕ್ಕೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿರುವ ಕುರುಡುಮಲೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ಚುನಾವಣ ಪ್ರಚಾರಕ್ಕೆ ಕೆಪಿಸಿಸಿ ಅಧಿಕೃತ ಚಾಲನೆ ನೀಡಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಪಕ್ಷದ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

ಈ ಮೊದಲು ಮಾ.29ರಂದು ಮುಳಬಾಗಿಲಿನ ಕುರುಡುಮಲೆ ಹಾಗೂ ಮಾ.30ರಂದು ಹಾಸನದ ಹೊಳೆನರಸೀಪುರದಿಂದ “ಪ್ರಜಾಧ್ವನಿ-2’ಕ್ಕೆ ಚಾಲನೆ ನೀಡಲು ಕಾಂಗ್ರೆಸ್‌ ಉದ್ದೇಶಿಸಿತ್ತು. ಈ ಸಂಬಂಧ ಎಲ್ಲ ಸಿದ್ಧತೆಗಳೂ ಪೂರ್ಣಗೊಂಡಿದ್ದವು. ಆದರೆ ಕೋಲಾರದಲ್ಲಿ ಪಕ್ಷದ ನಾಯಕರ ಭಿನ್ನಮತ ಸ್ಫೋಟಗೊಂಡು, ಅದು ರಾಜೀನಾಮೆ ಪ್ರಹಸನಕ್ಕೂ ತಲುಪಿದ್ದ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯಕ್ರಮ ಮುಂದೂಡಿಕೆಯಾಗಿತ್ತು.


Spread the love

About Laxminews 24x7

Check Also

ಅಕ್ರಮ ಚಿನ್ನ ಕಳ್ಳಸಾಗಣೆ ಕೇಸ್​: ರನ್ಯಾ ರಾವ್​ಗೆ ₹102 ಕೋಟಿ ದಂಡ ಪಾವತಿಸುವಂತೆ ಡಿಆರ್‌ಐ ನೋಟಿಸ್

Spread the loveಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನ ಎದುರಿಸುತ್ತಿರುವ ನಟಿ ರನ್ಯಾ ರಾವ್​​ಗೆ 102.55 ಕೋಟಿ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ