Breaking News

ಗಣಿನಾಡಿನಲ್ಲಿ ಕೋವಿಡ್-19 ಗೆದ್ದ ಕೊರೊನಾ ವಾರಿಯರ್ ಸೇರಿ ಮೂವರು ಡಿಸ್ಚಾರ್ಜ್

Spread the love

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಮಹಾಮಾರಿ ಕೊರೊನಾ ಸೋಂಕಿನಿಂದ ಗುಣಮುಖರಾದ ಮೂವರನ್ನು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರ ಸಮಕ್ಷಮದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾದ ಆ ಮೂವರನ್ನ ಚಪ್ಪಾಳೆ ತಟ್ಟುವ ಮೂಲಕ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಆತ್ಮೀಯವಾಗಿ ಬಿಡುಗಡೆಗೊಳಿಸಿದರು.

 

ಜಿಲ್ಲಾಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, 34 ವರ್ಷದ ಪುರುಷ, ರೋಗಿ ಸಂಖ್ಯೆ-2308 ಅವರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. 44 ವರ್ಷದ, ರೋಗಿ ಸಂಖ್ಯೆ-2781 ಮಥುರಾದಿಂದ ಬಳ್ಳಾರಿಗೆ ಪ್ರಯಾಣಿಸಿದ ಟ್ರಾವೆಲ್ ಹಿಸ್ಟರಿ ಹೊಂದಿದ್ದರು. 26 ವರ್ಷದ ಯುವತಿ, ರೋಗಿ ಸಂಖ್ಯೆ-2778 ಕುರಿಹಟ್ಟಿ ಮೂಲದವರೆಂದು ಗುರುತಿಸಲಾಗಿದೆ.

ಜಿಲ್ಲೆಯ ನಿನ್ನೆ ತಡರಾತ್ರಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 53ಕ್ಕೆ ಏರಿಕೆಯಾಗಿತ್ತು. ಇಂದು ಮೂವರು ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದರಿಂದ ಈವರೆಗೂ ಡಿಸ್ಚಾರ್ಜ್ ಆಗಿರುವ ಸಂಖ್ಯೆ 35ಕ್ಕೇರಿದೆ. ಇದುವರೆಗೂ ಜಿಲ್ಲೆ ಒಬ್ಬರು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದು, 17 ಸಕ್ರಿಯ ಪ್ರಕರಣಗಳಿವೆ


Spread the love

About Laxminews 24x7

Check Also

ಎಲೆ ಮರೆಯಲ್ಲಿ ಬೆತ್ತಲಾದ ನಟಿ

Spread the loveಬಾಲಿವುಡ್ ಮತ್ತು ಟಾಲಿವುಡ್ ಸಿನಿಮಾ ಮೂಲಕ ಕಿಯಾರಾ ಅಡ್ವಾಣಿ ಅಭಿಮಾನಿಗಳ ಮನಗೆದ್ದಿದ್ದಾರೆ. ಕಿಯಾರಾ ಸೋಶಿಯಲ್ ಮೀಡಿಯಾದಲ್ಲಿ ಆಯಕ್ಟಿವ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ