Breaking News

ಕೇಜ್ರಿವಾಲ್ ಬಂಧನ ಖಂಡಿಸಿ AAPಯಿಂದ ಸಾಮೂಹಿಕ ಉಪವಾಸ,

Spread the love

ವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನವನ್ನು ಖಂಡಿಸಿ ಎಎಪಿ ನಾಯಕರು ಭಾನುವಾರ ಜಂತರ್ ಮಂತರ್‌ನಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

ಎಎಪಿ ಆಡಳಿತವಿರುವ ಪಂಜಾಬ್‌ನಲ್ಲಿ ಮುಖ್ಯಮಂತ್ರಿ ಭಗವಂತ ಮಾನ್ ಅವರು, ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಹುಟ್ಟೂರಾದ ಖಟ್ಕರ್ ಕಲಾನ್‌ನಲ್ಲಿ ಸಾಮೂಹಿಕ ಉಪವಾಸದಲ್ಲಿ ಪಾಲ್ಗೊಂಡಿದ್ದಾರೆ.

ಕೇಜ್ರಿವಾಲ್ ಬಂಧನ ಖಂಡಿಸಿ AAPಯಿಂದ ಸಾಮೂಹಿಕ ಉಪವಾಸ, ವಿದೇಶಗಳಲ್ಲಿಯೂ ಪ್ರತಿಭಟನೆ

ದೆಹಲಿ ವಿಧಾನಸಭೆ ಸ್ಪೀಕರ್ ರಾಮ್ ನಿವಾಸ್ ಗೋಯೆಲ್, ಡೆಪ್ಯೂಟಿ ಸ್ಪೀಕರ್ ರಾಖಿ ಬಿಲಾ, ಸಚಿವರಾದ ಅತಿಶಿ, ಗೋಪಾಲ್ ರೈ ಮತ್ತು ಇಮ್ರಾನ್ ಹುಸೇನ್ ಸೇರಿದಂತೆ ಅನೇಕ ಎಎಪಿ ಹಿರಿಯ ನಾಯಕರು ಜಂತರ್ ಮಂತರ್‌ನಲ್ಲಿ ಬೆಳಿಗ್ಗೆ 11 ಗಂಟೆಯಿಂದ ಆರಂಭವಾದ ಸಾಮೂಹಿಕ ಉಪವಾಸದಲ್ಲಿ ಭಾಗವಹಿಸಿದ್ದರು.


Spread the love

About Laxminews 24x7

Check Also

ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು

Spread the love ಹುಕ್ಕೇರಿ : ಗೋಕಾಕ ತಾಲೂಕಿನ ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಧಾರಾಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ