Breaking News

ಸಿಎಂ ತವರಿನಲ್ಲೇ ಚುನಾವಣಾ ಬಹಿಷ್ಕಾರ

Spread the love

ಮೈಸೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವೆ ಎಂದು ಪಣತೊಟ್ಟಿರುವ ಸಿಎಂ ಸಿದ್ದರಾಮಯ್ಯಗೆ ಇದೀಗ ಭಾರೀ ಮುಖಭಂಗ ಉಂಟಾಗಿದ್ದು, ನಮಗೆ ಚುನಾವಣೆಯೇ ಬೇಡ, ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಪರ ಮತ ಕೇಳಲು​ ಹೋದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು, ಹೋಗಿ ಹೋಗಿ ನಾವು ವೋಟ್​ ಹಾಕಲ್ಲ. ಚುನಾವಣೆ ಬಹಿಷ್ಕರಿಸುತ್ತೇವೆ ಅಷ್ಟೇ ಎಂದು ನೇರ ಸವಾಲು ಹಾಕಿದ್ದಾರೆ.

ಸಿಎಂ ತವರಿನಲ್ಲೇ ಚುನಾವಣಾ ಬಹಿಷ್ಕಾರದ ಕೂಗು ಕೇಳಿಬಂದಿದ್ದು, ಪ್ರತಿಭಟನಾಕಾರರು ಯತೀಂದ್ರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸುನಿಲ್ ಬೊಸ್ ಜಯಕ್ಕಾಗಿ ಮತಯಾಚನೆಗೆ ತೆರಳಿದ್ದ ಸಿದ್ದರಾಮಯ್ಯ ಪುತ್ರ ಯತೀಂದ್ರರ ವಿರುದ್ಧ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಬಿಗ್‌ ಡೀಲ್‌ ಸಕ್ಸಸ್‌ – ಭಾರತದ ಮೇಲಿನ 25% ಹೆಚ್ಚುವರಿ ಸುಂಕ ಕಡಿತ ಆದೇಶಕ್ಕೆ ಟ್ರಂಪ್‌ ಸಹಿ

Spread the loveವಾಷಿಂಗ್ಟನ್‌: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಕೊನೆಗೂ ಸಕ್ಸಸ್‌ ಕಂಡಿದೆ. ರಷ್ಯಾ ತೈಲ ಖರೀದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ