Breaking News

ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಹಳೆಯ ಪಿಂಚಣಿಗೆ ಮಹತ್ವದ ಆದೇಶ

Spread the love

ಬೆಂಗಳೂರು: ಹಳೇ ಪಿಂಚಣಿ ಜಾರಿಗೆ ಒತ್ತಾಯಿಸಿ ಈಗಾಗಲೇ ಸಾಕಷ್ಟು ಹೋರಾಟಗಳು ನಡೆದಿವೆ. ಈಗ ರಾಜ್ಯ ಸರ್ಕಾರವೂ ಜಾರಿಗೆ ಒಪ್ಪಿಗೆ ನೀಡಿದ್ದಲ್ಲದೆ ಆದೇಶವನ್ನು ಸಹ ನೀಡಿದೆ. ಈ ಏಪ್ರಿಲ್‌ 1ರಂದು ರಾಜ್ಯ ಸರ್ಕಾರದಿಂದ ಮತ್ತೊಂದು ಆದೇಶ ಜಾರಿಯಾಗಿದ್ದು, ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

01.04.2006ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನಾ ವ್ಯಾಪ್ತಿಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ನೀಡಿದೆ. ಹಳೇ ಪಿಂಚಣಿ ವ್ಯವಸ್ಥೆಯನ್ನು ತೆಗೆದುಕೊಳ್ಳುವವರು ಸರಿಯಾಗಿ ನಿರ್ಧಾರ ಮಾಡಿ ಆಯ್ಕೆ ಮಾಡಿಕೊಳ್ಳಬೇಕು.

ಒಮ್ಮೆ ಆಯ್ಕೆ ಮಾಡಿಕೊಂಡ ಬಳಿಕ ಪುನಃ ಬದಲಾವಣೆ ಮಾಡಲು ಅವಕಾಶ ಇಲ್ಲ ಎಂದು ಹೇಳಿದೆ. ಹಳೇ ಪಿಂಚಣಿ ವ್ಯವಸ್ಥೆಗೆ ಒಳಪಡಿಸುವ ಸಂಬಂಧ 2006 ಏಪ್ರಿಲ್‌ 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆ ಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಸಂಬಂಧಪಟ್ಟ ಸರ್ಕಾರಿ ನೌಕರರಿಂದ ಅಭಿಮತ ಪಡೆದು ಕ್ರಮ ಕೈಗೊಳ್ಳುವ ಸಂಬಂಧಪಟ್ಟಂತೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

Old Pension Scheme: ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಹಳೆಯ ಪಿಂಚಣಿಗೆ ಮಹತ್ವದ ಆದೇಶ

ರಾಜ್ಯ ಸರ್ಕಾರ ವಿಧಿಸಿದ ಷರತ್ತುಗಳು ಏನು?

ದಿನಾಂಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗದಿತ ನಮೂನೆಯಲ್ಲಿ ದಿನಾಂಕ:30.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ.

ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ.

ಒಂದು ವೇಳೆ ಅರ್ಹ ಸರ್ಕಾರಿ ನೌಕರರು ನಿಗದಿತ ದಿನಾಂಕದೊಳಗೆ ಮೇಲೆ ಹೇಳಲಾದ ಆಯ್ಕೆಯನ್ನು ಮಾಡಿಕೊಳ್ಳದೆ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರಿಯುತ್ತಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ