Breaking News

ಪೋಕ್ಸೊ ಪ್ರಕರಣ: ತಲೆಮರೆಸಿಕೊಂಡಿದ್ದ ಶಿಕ್ಷಕ ಸೆರೆ

Spread the love

ಮೂಡುಬಿದಿರೆ: ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿ ಪೋಕ್ಸೊ ಪ್ರಕರಣ ಎದುರಿಸುತ್ತಾ ತಲೆಮರೆಸಿಕೊಂಡಿದ್ದ ಆರೋಪಿ ಕಲ್ಲಮುಂಡ್ಕೂರು ಪ್ರೌಢಶಾಲೆಯ ಶಿಕ್ಷಕ ಗುರು ಎಂ.ಪಿ.ಯನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.

ಪೋಕ್ಸೊ ಪ್ರಕರಣದಿಂದಾಗಿ ಶಾಲೆಯಿಂದ ಅಮಾನತುಗೊಂಡಿದ್ದ ಆರೋಪಿ ಗುರು ಇತ್ತೀಚೆಗೆ ಜಿಲ್ಲಾ ಸೆಶನ್ಸ್‌ ಕೋರ್ಟ್‌ನಲ್ಲಿ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು.

ಶಾಲೆಯ ಕೆಲವು ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಶಿಕ್ಷಕ ಗುರು ವಿರುದ್ಧ ಸಂತ್ರಸ್ತ ಮಕ್ಕಳು, ಅವರ ಹೆತ್ತವರು ಮತ್ತು ಶಾಲಾ ಮುಖ್ಯ ಶಿಕ್ಷಕರು ಮೂಡುಬಿದಿರೆ ಪೊಲೀಸ್‌ ಠಾಣೆಗೆ ನೀಡಿದ ದೂರಿನ ಪ್ರಕಾರ ಆರೋಪಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು.

ಪ್ರತಿಭಟನೆಗೆ ಸಿದ್ಧತೆ ನಡೆದಿತ್ತು
ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಕಲ್ಲಮುಂಡ್ಕೂರಿನಲ್ಲಿ ನಾಗರಿಕರು ಪ್ರತಿಭಟನೆಗೂ ಸಿದ್ಧತೆ ನಡೆಸಿದ್ದರು. ಪ್ರಕರಣವನ್ನು ಹೆಚ್ಚಿನ ತನಿಖೆಗೆ ಮಂಗಳೂರು ಮಹಿಳಾ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿತ್ತು. ಮೂಡುಬಿದಿರೆ ಪೊಲೀಸರು ಹಾಗೂ ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯು ಶಾಲೆ, ಸಾರ್ವಜನಿಕ ವೇದಿಕೆಗಳಲ್ಲಿ ಉತ್ತಮ ಉದ್ಘೋಷಕನಾಗಿ, ಕಲೆ, ಕ್ರೀಡಾ ಚಟುವಟಿಕೆಗಳಲ್ಲಿ ಒಳ್ಳೆಯ ಹೆಸರು ಗಳಿಸಿದ್ದ.


Spread the love

About Laxminews 24x7

Check Also

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ