Breaking News

ಚೆಕ್‌ಪೋಸ್ಟ್ನಲ್ಲಿ 12 ಕೋಟಿ ರೂ. ಮೌಲ್ಯದ ಆಭರಣ ವಶ

Spread the love

ದಾವಣಗೆರೆ : ನಗರದ ಹದಡಿ ರಸ್ತೆಯಲ್ಲಿರುವ ಲೋಕಿಕೆರೆ ಚೆಕ್‌ಪೋಸ್ಟ್ನಲ್ಲಿ ಗುರುವಾರ ರಾತ್ರಿ 12 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ, ವಜ್ರದ ಆಭರಣಗಳನ್ನು ಎಸ್.ಎಸ್.ಟಿ ತಂಡ ವಶಪಡಿಸಿಕೊಂಡಿದೆ.

ವಾಹನ ಬೆಂಗಳೂರಿನಿಂದ ದಾವಣಗೆರೆಗೆ ಬಂದಿತ್ತು. ಎಸ್.ಎಸ್.ಟಿ ತಂಡದ ಮುಖ್ಯಸ್ಥ ಆರ್.ಮಲ್ಲಿಕಾರ್ಜುನ, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಮತ್ತು ಕೆಟಿಜೆ ನಗರ ಠಾಣೆಯ ಪೊಲೀಸರಿದ್ದ ತಂಡವು ವಾಹನದ ತಪಾಸಣೆ ನಡೆಸಿತು.

ವಾಹನದಲ್ಲಿ ಪೆಂಡೆಂಟ್, ಡಾಲರ್, ವಜ್ರದ ಹರಳು ಸೇರಿ ಆಭರಣಗಳು ಇದ್ದವು. ಅವುಗಳಿಗೆ ಸಂಬಂಧಿಸಿದ ಸೂಕ್ತ ದಾಖಲಾತಿಗಳು ಇರಲಿಲ್ಲ. ವಾಹನವನ್ನು ವಶಪಡಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.


Spread the love

About Laxminews 24x7

Check Also

KRS ಡ್ಯಾಂಗೆ ಭಾಗಿನ ಅರ್ಪಣೆ ಮಾಡಿದ ಸಿಎಂ

Spread the loveಮಂಡ್ಯ: ರೈತರ ಜೀವನಾಡಿ ಕನ್ನಂಬಾಡಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೆ.ಆರ್.ಎಸ್. ಜಲಾಶಯಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ