Breaking News
Home / ರಾಜಕೀಯ / ಗ್ಯಾರಂಟಿಗಳಿಂದ ಹಳ್ಳಿ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ ಎಂದ ಕುಮಾರಸ್ವಾಮಿ

ಗ್ಯಾರಂಟಿಗಳಿಂದ ಹಳ್ಳಿ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ ಎಂದ ಕುಮಾರಸ್ವಾಮಿ

Spread the love

ಬೆಂಗಳೂರು, ಏಪ್ರಿಲ್‌ 14: ಕಾಂಗ್ರೆಸ್​ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ವಿವಾದಿತ ಹೇಳಿಕೆ ನೀಡಿದ್ದು, ಹೆಣ್ಣುಮಕ್ಕಳ ಬಗ್ಗೆ ಕುಮಾರಸ್ವಾಮಿಯವರ ಮನಸ್ಥಿತಿ ಏನು ಎಂದು ಅರ್ಥವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದಾಗಿ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿರುವ ಮಾಡಿ ಅವರ ಮನಸ್ಥಿತಿ ಅರ್ಥಮಾಡಿಕೊಳ್ಳಬೇಕು ದಾರಿತಪ್ಪಿದ್ದಾರೆ ಎಂದರೇನು? ಅವರ ಹೇಳಿಕೆಯಿಂದ ಹೆಣ್ಣುಮಕ್ಕಳ ಬಗ್ಗೆ ಅವರಿಗಿರುವ ಭಾವನೆ ಏನು ಎಂದು ಅರ್ಥವಾಗುತ್ತದೆ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು ಈ ರೀತಿ ಮಾತನಾಡಿದರೆ ಜನ ಸಹಿಸುತ್ತಾರೆಯೇ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಯವರು ವಿದ್ಯುತ್, ಮದ್ಯ, ಬಸ್, ಸ್ಟಾಂಪ್ ಪೇಪರ್ ಬೆಲೆ ಹೆಚ್ಚು ಮಾಡಿ ಗ್ಯಾರಂಟಿ ಕೊಡುತ್ತಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದಕ್ಕೆಲ್ಲ ಎಷ್ಟು ದುಡ್ಡು ಬರುತ್ತದೆ ಎಂದು ವಿಜಯೇಂದ್ರ ಅವರಿಗೆ ತಿಳಿದಿದೆಯೇ? ಗ್ಯಾರಂಟಿ ಯೋಜನೆಗಳಿಗಾಗಿ ಒಂದು ವರ್ಷಕ್ಕೆ 56,000 ಕೋಟಿ. ರೂ.ಗಳ ಅಗತ್ಯವಿದೆ. ಅವುಗಳಿಂದ ಅಷ್ಟು ಹಣ ಬರುತ್ತದೆಯೇ ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ 2018 ರಲ್ಲಿ 600 ಭರವಸೆಗಳನ್ನು ಕೊಟ್ಟ ಬಿಜೆಪಿ 60 ಭರವಸೆಗಳನ್ನೂ ಈಡೇರಿಸಿಲ್ಲ. ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿ ಪ್ರಣಾಳಿಕೆಯಲ್ಲಿ ಬಡ ಕುಟುಂಬಗಳಿಗೆ ಕಡಿಮೆ ಬೆಲೆಗೆ ಗ್ಯಾಸ್, ಯುವಶಕ್ತಿ, ನಾರಿಶಕ್ತಿ, ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಮೊದಲೇ ಮಾಡಿರುವ ಘೋಷಣೆಗಳ ಬಗ್ಗೆ ಚರ್ಚೆಯಾಗಬೇಕು. ವಿದೇಶಗಳಿಂದ ಕಪ್ಪುಹಣ ತಂದು 15 ಲಕ್ಷ ರೂಪಾಯಿ ತಂದುಕೊಟ್ಟರೇ, 2ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡಿದ ರೇ, ಮೆಕ್ ಇನ್ ಇಂಡಿಯಾ , ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಯಿತೇ ಎಂದು ಪ್ರಶ್ನಿಸಿದರು.

ಪ್ರಪಂಚದಾದ್ಯಂತ ರಾಮಾಯಣ ಅಭಿವೃದ್ಧಿ ಹಾಗೂ ಅಯೋಧ್ಯೆಯ ಅಭಿವೃದ್ಧಿ ಕೈಗೊಳ್ಳುವುದಾಗಿ ಬಿಜೆಪಿ ಹೇಳಿರುವ ಬಗ್ಗೆ ಮಾತನಾಡಿ ಪ್ರಣಾಳಿಕೆಯನ್ನು ನೋಡಿಲ್ಲ. ನೋಡಿದ ನಂತರ ಉತ್ತರಿಸುವೆ. 10 ವರ್ಷಗಳಲ್ಲಿ ಪ್ರಧಾನಮಂತ್ರಿಯಾಗಿ ಏನು ಮಾಡಿದ್ದಾರೆ ಎಂದು ಮೊದಲು ಹೇಳಬೇಕು. ಅದರ ಅವಲೋಕನ ಆದ ನಂತರ ಮುಂದಿನದ್ದು ಹೇಳಬೇಕು. ಬಿಜೆಪಿ ಸರ್ಕಾರ 25 ಕೋಟಿ ಉದ್ಯೋಗ ಸೃಷ್ಟಿಸಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. 25 ಕೋಟಿ ಉದ್ಯೋಗ ಯಾರಿಗೆ ಕೊಟ್ಟಿದ್ದಾರೆ ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ