ರಾಮದುರ್ಗ: ತಾಲ್ಲೂಕಿನ ಅವರಾದಿ ಗ್ರಾಮದ ಹತ್ತಿರ ಮಲಪ್ರಭಾ ನದಿಯಲ್ಲಿ ಮುಳುಗುತ್ತಿದ್ದ 14 ವರ್ಷದ ಬಾಲಕನ ರಕ್ಷಿಸಲು ಮುಂದಾದ ವ್ಯಕ್ತಿಯೇ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.
ಶ್ರೀಶೈಲ ಈರಪ್ಪ ಮುದಕನ್ನವರ (45) ಮೃತರು. ‘ಬಾಲಕ ವಿಜಯ ಹೊಳೆನ್ನವರ ನದಿಯಲ್ಲಿ ಮುಳುಗುತ್ತಿದ್ದಾಗ ರಕ್ಷಣೆಗೆ ಶ್ರೀಶೈಲ ಧಾವಿಸಿದ್ದರು.
ಬಾಲಕನನ್ನು ರಕ್ಷಿಸಿದ ಬಳಿಕ ನೀರಿನ ಸೆಳೆತಕ್ಕೆ ಸಿಲುಕಿ ಶ್ರೀಶೈಲ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಸುರೇಬಾನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7