Breaking News

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

Spread the love

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಮೇಲೆ ಭಾರತಕ್ಕೆ ಕಪ್ಪುಚುಕ್ಕೆಯಾಗಿರುವ ಪಾಕ್‌ ಆಕ್ರಮಿತ ಕಾಶ್ಮೀರ ಎಂಬ ಪ್ರದೇಶವನ್ನು ಕಿತ್ತುಹಾಕಿ ಭಾರತದ ಭೂಪಟದಲ್ಲಿ ಸೇರಿಸಲಿದ್ದಾರೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ

ಹೇಳಿದರು.

ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ರವಿವಾರ ಬಿಜೆಪಿ ಬೂತ್‌ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು,
ಮೋದಿ ಅವರ ಆಡಳಿತ ಬಂದ ನಂತರ ಜಮ್ಮು ಮತ್ತು ಕಾಶ್ಮೀರದ ಚಿತ್ರ ಬದಲಾಗಿದೆ. ಅಭಿವೃದ್ಧಿಯ ಹೊಸ ಅಧ್ಯಾಯ
ಅರಂಭವಾಗಿದೆ. ಮೂರನೇ ಬಾರಿಗೆ ಪ್ರಧಾನಿಯಾದ ನಂತರ ನಾವು ಪಿಒಕೆ ಕಪ್ಪುಚುಕ್ಕೆ ಕಿತ್ತುಹಾಕಿ ಅಖಂಡ ಜಮ್ಮು ಮತ್ತು ಕಾಶ್ಮೀರ ನಕಾಶೆಯನ್ನು ನೋಡುತ್ತೇವೆ. ಇಡೀ ದೇಶಕ್ಕೆ ಅನ್ವಯವಾಗುವಂತೆ ಎಲ್ಲರಿಗೂ ಒಂದೇ ಕಾನೂನು ಜಾರಿಗೆ ಬರಲಿದೆ ಎಂದರು.

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ದೇಶದ ಆರ್ಥಿಕತೆ ಪ್ರಗತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭದ್ರಬುನಾದಿ ಹಾಕಿದ್ದಾರೆ. ಇದರ ಫಲವಾಗಿ ಶೀಘ್ರದಲ್ಲೇ
ಭಾರತ ವಿಶ್ವದ ಪ್ರಭಾವಶಾಲಿ ರಾಷ್ಟ್ರವಾಗಿ ಹೊರಹೊಮ್ಮಲಿದೆ. ಆರ್ಥಿಕ ಕ್ಷೇತ್ರದಲ್ಲಿ ವಿಶ್ವದ ಮೂರನೇ ಶಕ್ತಿಶಾಲಿ ರಾಷ್ಟ್ರವಾಗಿರುವ ಭಾರತ ಮುಂದಿನ ವರ್ಷಗಳಲ್ಲಿ ಮೊದಲ ಸ್ಥಾನಕ್ಕೆ ಬರಲಿದೆ ಎಂದು ಹೇಳಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನಲ್ಲಿ ಯಾವಾಗಲೂ ಬೆಳಗಾವಿ ದಕ್ಷಿಣ ಕ್ಷೇತ್ರ ಅತ್ಯಂತ ಮಹತ್ವದ ಪಾತ್ರ
ವಹಿಸುತ್ತ ಬಂದಿದೆ. ಇದೇ ಹಿನ್ನಲೆಯಲ್ಲಿ ಈ ಬಾರಿ ನಾನೂ ಸಹ ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಒಂದು ಲಕ್ಷ ಮುನ್ನಡೆ
ಪಡೆಯುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ