Breaking News

ತಾಕತ್ತಿದ್ದರೆ ಗೆಲ್ಲುವ ಒಂದೆರಡು ಕ್ಷೇತ್ರಗಳ ಹೆಸರು ಹೇಳಲಿ: BSY

Spread the love

ದಾವಣಗೆರೆ: ಕಾಂಗ್ರೆಸ್ ಗೆ ತಾಕತ್ತಿದ್ದರೆ ರಾಜ್ಯದಲ್ಲಿ ತಮ್ಮ ಪಕ್ಷ ಗೆಲ್ಲುವ ಒಂದೆರಡು ಕ್ಷೇತ್ರಗಳ ಹೆಸರು ಹೇಳಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸವಾಲು ಹಾಕಿದರು.

Congress ತಾಕತ್ತಿದ್ದರೆ ಗೆಲ್ಲುವ ಒಂದೆರಡು ಕ್ಷೇತ್ರಗಳ ಹೆಸರು ಹೇಳಲಿ: ಬಿಎಸ್ ವೈ

ಸೋಮವಾರ ಮಾಯಕೊಂಡ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ತ್ಯಾವಣಗಿಗ್ರಾಮದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ದೇಶದಲ್ಲಿ ಕಾಂಗ್ರೆಸ್ ಮುಳುಗುವ ಹಡಗು. ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಧೂಳಿಪಟವಾಗಲಿದೆ. ಕಾಂಗ್ರೆಸ್ ಇಷ್ಟು ವರ್ಷ ಹಣ, ಹೆಂಡ, ತೋಳ್ಬಲ, ಅಧಿಕಾರ ಬಲದಿಂದ ಜಾತಿಯ ವಿಷ ಬೀಜ ಬಿತ್ತಿ ಅಧಿಕಾರಕ್ಕೆ ಬರುತ್ತಿದೆ. ಆದರೆ, ಈಗ ಕಾಂಗ್ರೆಸ್ ಆಟ ನಡೆಯುವುದಿಲ್ಲ. ಜನ ಬುದ್ಧಿವಂತರಾಗಿದ್ದಾರೆ. ಮೋದಿಜೀ ಅವರ ಆಡಳಿತ ಮೆಚ್ಚಿಕೊಂಡಿದ್ದಾರೆ ಎಂದರು.

ಈ ಬಾರಿ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಮೈತ್ರಿ ಅಭ್ಯರ್ಥಿಗಳು ಗೆಲ್ಲುವುದು, ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಆಗುವುದು ನಿಶ್ಚಿತ ಎಂದರು.


Spread the love

About Laxminews 24x7

Check Also

KRS ಡ್ಯಾಂಗೆ ಭಾಗಿನ ಅರ್ಪಣೆ ಮಾಡಿದ ಸಿಎಂ

Spread the loveಮಂಡ್ಯ: ರೈತರ ಜೀವನಾಡಿ ಕನ್ನಂಬಾಡಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೆ.ಆರ್.ಎಸ್. ಜಲಾಶಯಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ