Breaking News

ನಮ್ಮದು ಮೊಘಲ್ ಸರ್ಕಾರವಲ್ಲ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್‌ ಚಾಟಿ

Spread the love

ಬೆಂಗಳೂರು: ‘ನಮ್ಮದು ಜನರ ಕಲ್ಯಾಣಕ್ಕಾಗಿ ಶ್ರಮಿಸುವ ಆಡಳಿತ ವ್ಯವಸ್ಥೆ ಎಂಬುದನ್ನು ಮರೆಯಬೇಡಿ. ಇದು ಮೊಘಲರ ಸರ್ಕಾರವಲ್ಲ’ ಎಂದು ಹೈಕೋರ್ಟ್‌, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್‌ಪಿಸಿಬಿ) ಚಾಟಿ ಬೀಸಿದೆ.

ಸಿದ್ಧಸಿರಿ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ನೀಡಲಾಗಿದ್ದ ನೋಟಿಸ್‌ ರದ್ದುಪಡಿಸುವಂತೆ ಕೋರಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಪುತ್ರ ಹಾಗೂ ಸಂಸ್ಥೆಯ ನಿರ್ದೇಶಕ ರಮಣಗೌಡ ಬಿ.ಪಾಟೀಲ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ನಮ್ಮದು ಮೊಘಲ್ ಸರ್ಕಾರವಲ್ಲ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್‌ ಚಾಟಿ

ವಿಚಾರಣೆ ವೇಳೆ ನ್ಯಾಯಪೀಠವು, ‘ಘಟಕ ಮುಚ್ಚಲು ಕಾರಣವೇನು’ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಗೆ ಪ್ರಶ್ನಿಸಿತು. ಇದಕ್ಕೆ ಕೆಎಸ್‌ಪಿಸಿಬಿ ಅಧಿಕಾರಿಗಳು, ‘ಈ ಘಟಕವನ್ನು ನಡೆಸಲು ಪರಿಸರ ಇಲಾಖೆ ಅನುಮತಿ ನೀಡಿಲ್ಲ’ ಎಂದು ತಿಳಿಸಿದರು.

ಅತೃಪ್ತಿ ವ್ಯಕ್ತಪಡಿಸಿದ ನ್ಯಾಯಪೀಠ, ‘ಏಕಾಏಕಿ ಮುಚ್ಚಲು ಆದೇಶ ನೀಡಿದ ಬಗ್ಗೆ ಕಾರಣ ಕೊಡಬೇಕು. ನಿಮ್ಮ ತೀರ್ಮಾನದ ಹಿಂದಿನ ಕಾರಣ ಜನರಿಗೆ ತಿಳಿಯಬೇಕು’ ಎಂದು ಅತೃಪ್ತಿ ವ್ಯಕ್ತಪಡಿಸಿತು. ವಿಚಾರಣೆಯನ್ನು ಜೂನ್‌ 4ಕ್ಕೆ ಮುಂದೂಡಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ